ತುಮಕೂರು ಗ್ರಾಮಾಂತರ ಕ್ಷೇತ್ರದ ಮುಖಂಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಟಿ.ಶ್ರೀನಿವಾಸ್ ಅವರು ಎಂ.ಸಿ.ವೇಣುಗೋಪಾಲ್ ರವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನಿಡುವಂತೆ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ತಮ್ಮ ಬೆಂಬಲಿಗರೊಂದಿಗೆ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಎಸ್.ಟಿ.ಶ್ರೀನಿವಾಸ್ ರವರು ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯ, ಸರ್ವರಿಗೂ ಸಮಾನ ಅಧಿಕಾರದ ಅವಕಾಶ ನೀಡುತ್ತಾ ಬಂದಿದೆ. ಕಾಂಗ್ರೆಸ್ ಪಕ್ಷದಿಂದ ಮಾತ್ರವೇ ಹಿಂದುಳಿದ ಸಮಾಜದವರು, ಸಾಮಾನ್ಯ ಕಾರ್ಯಕರ್ತರೂ ರಾಜಕೀಯ ಅಧಿಕಾರ ಪಡೆಯಲು ಅವಕಾಶ ಕಲ್ಪಿಸಿ ಕೋಟ್ಟಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷಕ್ಕೆ ನಿಷ್ಠವಂತರಾಗಿರುವ ನಾಯಕ ಪಕ್ಷ ಸಂಘಟನೆಗೆ ನಿರಂತರ ಶ್ರಮಿಸುತ್ತಿರುವ ಎಂ.ಸಿ.ವೇಣುಗೋಪಾಲ್ ರವರು ಪಕ್ಷಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳು ಅನೇಕ ಚುನಾವಣೆ ಗೆಲ್ಲಲು ಇವರ ಶ್ರಮ ಅಪಾರವಾಗಿದೆ. ದಕ್ಷ ನಾಯಕರಾಗಿರುವ ಎಂ.ಸಿ.ವೇಣುಗೋಪಾಲ್ ಅವರಿಗೆ ಕಾಂಗ್ರೆಸ್ ಪಕ್ಷ ಈ ಬಾರಿ ವಿಧಾನ ಪರಿಷತ್ ಸದಸ್ಯರಾಗಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದರು. ವೇಣುಗೋಪಾಲ್ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡಲು ಗೃಹ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್, ಸಚಿವ ಕೆ.ಎನ್.ರಾಜಣ್ಣ ಅವರು ಬೆಂಬಲ ನೀಡಿ ಸಹಕರಿಸಬೇಕು ಎಂದು ಎಸ್.ಟಿ.ಶ್ರೀನಿವಾಸ್ ವಿನಂತಿಸಿಕೊಂಡರು
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಯಗಿರುವ ನಾನು ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದು, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಪಕ್ಷ ಅವಕಾಶ ನೀಡುತ್ತದೆ ಎಂಬ ವಿಶ್ವಾಸವಿದೆ. ಆದಾಗ್ಯೂ ಪಕ್ಷದ ನಾಯಕರ ನಿರ್ದೇಶನ, ಆದೇಶ ಪಾಲಿಸಿಕೊಂಡು ಪಕ್ಷದ ಬೆಳವಣಿಗೆಗೆ ದುಡಿಯುತ್ತೇನೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ
ಕಾಂಗ್ರೆಸ್ ಮುಖಂಡ, ಚಲನಚಿತ್ರ ನಟ ತುಮಕೂರು ಮೋಹನ್, ಮುಖಂಡರಾದ ವಿಜಯ್ ಹೆಗ್ಗೆರೆ, ಅರೆಯೂರು ಲೋಕೇಶ್, ಸೈಯದ್ ಸಾದರ್, ಪಿ.ಶಿವಾಜಿ, ಜಿ.ಟಿ.ಪ್ರಕಾಶ್, ಸುರೇಶ್, ಮಲ್ಲಸಂದ್ರ ಉಮಾಶಂಕರ್, ರವಿಕುಮಾರ್, ಶಿವರಾಜ್ ಕುಚ್ಚಂಗಿ, ಮುಂತಾದವರು ಉಪಸ್ಥಿತರಿದ್ದರು.