ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನದ ಕುರಿತು ಕಾನೂನು ಅರಿವು ಕಾರ್ಯಕ್ರಮ

ತಿಪಟೂರು: ನಗರದ ಕೆ.ಎಲ್.ಎ. ಕಾನೂನು ಕಾಲೇಜಿನಲ್ಲಿ ದಿನಾಂಕ 11/06/ 2024 ರ ಮಂಗಳವಾರದಂದು ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ವಕೀಲರ ಸಂಘ ಹಾಗೂ ಕಾರ್ಮಿಕ ಇಲಾಖೆ ತಿಪಟೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಾಲಕಾರ್ಮಿಕ ನಿರ್ಮೂಲನೆಯ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

 

 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಮತಿ ದೀಪಾ.ವಿ ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು ತಾಲ್ಲೂಕು ಕಾನೂನು ಸೇವಾ ಸಮಿತಿ,ತಿಪಟೂರು ರವರು ಮಾತನಾಡಿ ಸಂವಿಧಾನವು ನಮಗೆ ಕೊಟ್ಟಿರುವ ಮೂಲಭೂತ ಹಕ್ಕುಗಳನ್ನು ಚಲಾಯಿಸುವುದರ ಜೊತೆಗೆ, ಮೂಲಭೂತ ಕರ್ತವ್ಯಗಳನ್ನೂ ಸಹ ಪಾಲಿಸಬೇಕು.ಸಾಮಾಜಿಕ ಬದ್ಧತೆ ಹಾಗೂ ಸಾಮಾಜಕ್ಕೆ ನಮ್ಮೆಲ್ಲರ ಕೊಡುಗೆಗಳ ಬಗ್ಗೆ ಪ್ರಶ್ನಿಸಿಕೊಳ್ಳಬೇಕಾಗಿದೆ. ಸಾಮಾಜಿಕ ಕಳಕಳಿಯಿಂದ ಕೆಲಸ ಮಾಡುವಾಗ ಅಡ್ಡಿ ಆತಂಕಗಳು ಸಾಮಾನ್ಯವಾಗಿ ಬರುತ್ತವೆ. ಯಾವುದಕ್ಕೂ ಎದೆಗುಂದದೆ ಹಾಗೂ ಯಾವುದೇ ಫಲಾಪೇಕ್ಷೆ ಇಲ್ಲದೆ ನಮ್ಮ ಸಾಮಾಜಿಕ ಕರ್ತವ್ಯಗಳನ್ನು ಪಾಲಿಸಬೇಕು. ಸಾಮಾಜಿಕ ಪಿಡುಗಾದ ಬಾಲಕಾರ್ಮಿಕತೆಯನ್ನು ನಿರ್ಮೂಲನೆಗೊಳಿಸುವಲ್ಲಿ ಎಲ್ಲರೂ ಕೈಜೋಡಿಸಬೇಕೆಂದು ಕಾನೂನು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

 

 

ತಾಲ್ಲೂಕು ವಕೀಲರ ಸಂಘದ ಉಪಾಧ್ಯಕ್ಷರಾದ ಎಂ.ಸಿ.ನಟರಾಜು ರವರು ಮಾತನಾಡಿ ಶಿಕ್ಷಣದ ಕೊರತೆ ಹಾಗೂ ಬಡತನವು ಬಾಲಕಾರ್ಮಿಕ ಪದ್ಧತಿಗೆ ಮೂಲ ಕಾರಣವಾಗಿದ್ದು, ಬಾಲಕಾರ್ಮಿಕರು ಕಂಡು ಬಂದಲ್ಲಿ ನಮ್ಮೆಲ್ಲರ ಜವಾಬ್ದಾರಿಯ ಬಗ್ಗೆ ತಿಳಿಸಿದರು.ಬಾಲಕಾರ್ಮಿಕ ನಿರ್ಮೂಲನೆಗೆ ಸರ್ಕಾರವು ಸಾಕಷ್ಟು ಕಾರ್ಯಕ್ರಮಗಳನ್ನು ನಿರೂಪಿಸಿದ್ದು ಎಲ್ಲರಿಗೂ ತಲುಪಿಸುವ ನಿಟ್ಟಿನಲ್ಲಿ ಅರಿವು ಮೂಡಿಸಬೇಕಾಗಿದೆ.ವಲಸೆ ಕಾರ್ಮಿಕರ ಬಗ್ಗೆ ಕಟ್ಟುನಿಟ್ಟಿನ ಕಾನೂನನ್ನು ರೂಪಿಸಬೇಕಾಗಿದೆ. ಇದರಿಂದ ಕಳ್ಳತನ, ದರೋಡೆ, ಅತ್ಯಾಚಾರ, ಮಾನವ ಕಳ್ಳ ಸಾಗಾಣಿಕೆ ಹಾಗೂ ಇನ್ನಿತರ ಸಮಾಜಘಾತಕ ಚಟುವಟಿಕೆಗಳನ್ನು ನಿಯಂತ್ರಿಸಬಹುದು ಎಂದು ಅಭಿಪ್ರಾಯಪಟ್ಟರು.

 

 

ತಾಲ್ಲೂಕು ವಕೀಲರ ಸಂಘದ ಕಾರ್ಯದರ್ಶಿಗಳಾದ ಬಿ. ಮಲ್ಲಿಕಾರ್ಜುನಯ್ಯ ಮಾತನಾಡಿ ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರ ಬಗ್ಗೆ ವಿವರಣೆ ನೀಡಿದರು. ಬಾಲಕಾರ್ಮಿಕತೆಯು ಶಿಕ್ಷಾರ್ಹ ಅಪರಾಧವಾಗಿದ್ದು, ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳುವವರಿಗೆ ಇರುವ ಶಿಕ್ಷೆ ಹಾಗೂ ದಂಡದ ಪ್ರಮಾಣದ ಬಗ್ಗೆ ವಿವರಣೆ ನೀಡಿದರು.

 

 

 

ತಿಪಟೂರು ವೃತ್ತದ ಕಾರ್ಮಿಕ ನಿರೀಕ್ಷಕರಾದ ವೆಂಕಟೇಶ್ ಬಾಬು ಡಿ.ಎಂ. ಮಾತನಾಡಿ ಬಾಲ ಕಾರ್ಮಿಕರು ಕಂಡುಬಂದಲ್ಲಿ ನಮ್ಮ ಸಾಮಾಜಿಕ ಜವಾಬ್ದಾರಿಯ ಹಾಗೂ ಬಾಲಕಾರ್ಮಿಕರಿಗೆ ಸಂಬಂಧಿಸಿದ ಕಾಯ್ದೆಗಳ ಬಗ್ಗೆ ತಿಳಿಸಿದರು.
ಬಾಲ ಕಾರ್ಮಿಕರು ಕಂಡು ಬಂದಲ್ಲಿ ಹತ್ತಿರದ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ಕಾರ್ಮಿಕ ಇಲಾಖೆಯ ಗಮನಕ್ಕೆ ತರಬೇಕು.1098 ಸಹಾಯವಾಣಿಯನ್ನು ಸಹ ಸಂಪರ್ಕಿಸಬಹುದೆಂದು ತಿಳಿಸಿದರು.

 

 

 

ಕಾರ್ಯಕ್ರಮದಲ್ಲಿ ಕೆ.ಎಲ್.ಎ. ಕಾನೂನು ಕಾಲೇಜಿನ ಅಧ್ಯಕ್ಷರಾದ ಬಿ.ಎನ್. ನಾಗೇಂದ್ರ, ಕಾರ್ಯದರ್ಶಿಗಳಾದ ಎಸ್. ಶಶಿಧರ್, ಟ್ರಸ್ಟಿಗಳಾದ ಶಿಬಿನ್, ಪ್ರಾಂಶುಪಾಲರಾದ ಶ್ರೀಮತಿ ಪಿ.ಕೆ.ವನೀತಾ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ : ಸೋಮನಾಥ್

Leave a Reply

Your email address will not be published. Required fields are marked *