ಗುಬ್ಬಿ ಪಟ್ಟಣದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿ ಸಾರ್ವಜನಿಕರಿಗೆ ಅಗತ್ಯವಿರುವ ಬಸ್ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಶಾಸಕ ಎಸ್ ಆರ್ ಶ್ರೀನಿವಾಸ್ ರವರು ಕೆ ಎಸ್ ಆರ್ ಟಿ ಸಿ ಉನ್ನತ ಅಧಿಕಾರಿಗಳೊಂದಿಗೆ ಬುಧವಾರ ಬಸ್ ನಿಲ್ದಾಣಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಟ್ಟಣದ ಬಸ್ ನಿಲ್ದಾಣದಲ್ಲಿ ಇರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸುವಂತೆ ಅಧಿಕಾರಿಗೆ ತಿಳಿಸಲಾಗಿದೆ. ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದ್ದು, ಈಗಾಗಲೇ ಬಸ್ ನಿಲ್ದಾಣದ ನೀಲಿ ನಕ್ಷೆ ತಯಾರಿಸಲು ಮುಂದಾಗಿದ್ದಾರೆ. ಶೀಘ್ರ ಅನುದಾನ ಬಿಡುಗಡೆಗೊಳಿಸಿಕೊಂಡು ಉತ್ತಮ ಸೌಕರ್ಯವುಳ್ಳ ನಿಲ್ದಾಣವನ್ನು ನಿರ್ಮಿಸಲಾಗುವುದು ಎಂದರು.
ತಾಲೂಕಿನ ಜನತೆಯ ಬಹುದಿನದ ಕನಸಾಗಿರುವ ಬಸ್ ಡಿಪೋ ನಿರ್ಮಿಸಲು ಈಗಾಗಲೇ ಜಾಗ ಗುರುತಿಸಿದ್ದು ಮುಂದಿನ ಬಜೆಟ್ ನಲ್ಲಿ ಅನುದಾನ ನಿಗದಿಪಡಿಸಿ ಅದನ್ನು ಕಾರ್ಯ ರಂಭ ಮಾಡುತ್ತೇವೆ ಎಂದು ಹೇಳಿದರು.
ಗ್ರಾಮೀಣ ಭಾಗಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಯಾವುದೇ ತೊಂದರೆಯಾದಲ್ಲಿ ಸಾರ್ವಜನಿಕರು ಗಮನಕ್ಕೆ ತಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ರಸ್ತೆ ಸಾರಿಗೆ ಸಂಸ್ಥೆಯ ಉನ್ನತ ಅಧಿಕಾರಿಗಳು, ಪಟ್ಟಣಪಂಚಾಯಿತಿ ಸದಸ್ಯರು, ಸಾರ್ವಜನಿಕರು ಹಾಜರಿದ್ದರು