ಗುಬ್ಬಿ : ಆರೋಗ್ಯವೇ ಭಾಗ್ಯ ಎಂಬುದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕಾಗಿದೆ ಹಣವನ್ನು ಎಷ್ಟು ಬೇಕಾದರೂ ದುಡಿಯಬಹುದು ಆದರೆ ಆರೋಗ್ಯ ಪಡೆಯುವುದು ಕಷ್ಟ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ತಿಳಿಸಿದರು.
ಗುಬ್ಬಿ ಪಟ್ಟಣದ ಕನ್ನಿಕಾ ಪರಮೇಶ್ವರಿ ಸಮುದಾಯ ಭವನದಲ್ಲಿ ಚಾಲುಕ್ಯ ಆಸ್ಪತ್ರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ಸುಮಾರು 40 ವರ್ಷಗಳಿಂದಲೂ ಕೂಡ ರಾಜ್ಯದ ಹಲವು ಭಾಗದಲ್ಲಿ ಸಾಮಾಜಿಕ ಸೇವೆಯನ್ನು ಮಾಡುವ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಎಲ್ಲ ರೀತಿಯ ಕಾರ್ಯಕ್ರಮಗಳನ್ನು ಆ ಯೋಜನೆ ಮಾಡಲಾಗುತ್ತಿದೆ
ಆರ್ಥಿಕವಾಗಿ ಅಭಿವೃದ್ಧಿಯಾಗಬೇಕು ಎಂಬ ದೃಷ್ಟಿಯಿಂದ ಪ್ರತಿ ಗ್ರಾಮಗಳಲ್ಲಿಯೂ ಕೂಡ ಸ್ವಸಹಾಯ ಸಂಘಗಳನ್ನು ಮಾಡುವ ಮೂಲಕ ಅವರಿಗೆ ಆರ್ಥಿಕ ಶಕ್ತಿಯನ್ನು ತುಂಬುವ ಕೆಲಸವನ್ನು ಮಾಡುತ್ತಿದ್ದೇವೆ
ಧಾರ್ಮಿಕವಾಗಿ ಸಾಮಾಜಿಕವಾಗಿ ಶಿಕ್ಷಣ ಉದ್ಯೋಗ ಆರೋಗ್ಯ ಎಲ್ಲ ರೀತಿಯ ವಿಚಾರಗಳನ್ನು ತಿಳಿಸುವ ಮೂಲಕ ಜನರಿಗೆ ಹೆಚ್ಚಿನ ಅನುಕೂಲವನ್ನು ಮಾಡಿಕೊಡುತ್ತಿದ್ದೇವೆ ಎಂದು ತಿಳಿಸಿದರು.