ಸಿದ್ದಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ: ಸಾಧಕರಿಗೆ ಸನ್ಮಾನ

ತುಮಕೂರು: ಶಿಕ್ಷಕರು ಕೇವಲ ಶೈಕ್ಷಣಿಕ ಜ್ಞಾನವನ್ನು ನೀಡುವುದಲ್ಲದೆ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ, ಉತ್ತಮ ಮನುಷ್ಯರಾಗಿ ಮತ್ತು ದೇಶದ ಉತ್ತಮ ನಾಗರಿಕರಾಗಿ ಬೆಳೆಯಲು ಸಹಕರಿಸುತ್ತಾರೆ. ರಾಷ್ಟ್ರ ನಿರ್ಮಾಣದಲ್ಲಿ ಅವರ ಕೊಡುಗೆ ಅಪಾರ ಎಂದು ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ ಅವರು ಅಭಿಪ್ರಾಯಪಟ್ಟರು.

ನಗರದ ಹೊರವಲಯದ ಅಗಳಕೋಟೆಯ ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆಯಲ್ಲಿ ‘ಸಾಧಕ ಶಿಕ್ಷಕನ್ನು’ ಸನ್ಮಾಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ದೇಶದ ಪ್ರಜೆಗಳಾಗಿರುವುದರಿಂದ ಶಿಕ್ಷಕರು ದೇಶದ ಭವಿಷ್ಯವನ್ನು ರೂಪಿಸುವ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಈ ಕಾರಣಕ್ಕಾಗಿ ಶಿಕ್ಷಕರನ್ನು ರಾಷ್ಟ್ರ ನಿರ್ಮಾಣದ ನಿರ್ಮಾತೃ ಎಂದು ಪರಿಗಣಿಸಲಾಗುತ್ತದೆ ಎಂದರು.

ವಿದ್ಯಾರ್ಥಿಗಳ ಜೀವನ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ವಹಿಸುವ ಮಹತ್ವದ ಪಾತ್ರವನ್ನು ಗುರುತಿಸಲಾಗುತ್ತದೆ. ಅವರ ನಿಸ್ವಾರ್ಥ ಸೇವೆ, ಮಾರ್ಗದರ್ಶನ, ಜ್ಞಾನ ಮತ್ತು ತ್ಯಾಗಕ್ಕಾಗಿ ಕೃತಜ್ಞತೆ ಸಲ್ಲಿಸಲು ದಿನವನ್ನು ಮೀಸಲಿಡಲಾಗಿರುವುದ ಅರ್ಥಪೂರ್ಣವಾಗಿದೆ ಎಂದು ಡಾ.ಕೆ.ಬಿ.ಲಿಂಗೇಗೌಡ ಹೇಳಿದರು.

 

 

ಸಾಹೇ ರಿಜಿಸ್ಟ್ರಾರ್ ಡಾ.ಅಶೋಕ್ ಮೆಹ್ತಾ ಮಾತನಾಡಿ, ಒಳ್ಳೆಯ ಮನುಷ್ಯರಾಗಿ, ನಮ್ಮ ಸಮಾಜದ ಉತ್ತಮ ಸದಸ್ಯರಾಗಲು ಮತ್ತು ದೇಶದ ಆದರ್ಶ ನಾಗರಿಕರನ್ನಾಗಿ ಮಾಡಲು ಶಿಕ್ಷಕರ ಪಾತ್ರ ಮಹತ್ವದ್ದಾಗಿರುತ್ತದೆ. ನಮ್ಮ ಜೀವನದಲ್ಲಿ ಶಿಕ್ಷಕರು ವಹಿಸುವ ಕಷ್ಟ, ಸವಾಲುಗಳು ಮತ್ತು ಅಪ್ರತಿಮ ಪಾತ್ರವನ್ನು ಒಪ್ಪಿಕೊಳ್ಳುವ ಆಚರಣೆಯಾಗಿದೆ ಎಂದರು.

 

 

ಚಿತ್ರದುರ್ಗ ವೈದ್ಯಕೀಯ ಕಾಲೇಜಿನ ಡೀನ್ ಮತ್ತು ನಿರ್ದೇಶಕ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಡಾ ಯುವರಾಜ್ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ನಮ್ಮ ಗುರುಗಳು ನಮ್ಮ ಯಶಸ್ಸಿನ ನಿಜವಾದ ಆಧಾರ ಸ್ತಂಭಗಳು. ಅವರು ನಮಗೆ ಜ್ಞಾನವನ್ನು ಸಂಗ್ರಹಿಸಲು, ನಮ್ಮ ಕೌಶಲ್ಯಗಳನ್ನು ಸುಧಾರಿಸಲು, ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಾಯ ಮಾಡುತ್ತಾರೆ ಮತ್ತು ಯಶಸ್ಸಿನ ಸರಿಯಾದ ಮಾರ್ಗವನ್ನು ಆಯ್ಕೆ ಮಾಡಲು ಸಹಾಯ ಮಾಡುತ್ತಾರೆ ಎಂದರು.

 

 

 

ರಾಜ್ಯದ ವಿವಿಧ ವೈದ್ಯಕೀಯ ಕಾಲೇಜಿನ ಭೋದನೆ ಮಾಡುತ್ತಿರುವ ಡಾ.ಸತೀಶ ಬಾಬು, ಡಾ ರಮ್ಯ,
ಡಾ.ನವೀನ್ ಕುಮಾರ್, ಡಾ ಆರೀಫ್ ಅಹಮ್ಮದ್, ಮತ್ತು ಡಾ ಯುವರಾಜ್ ಅವರನ್ನು ಸನ್ಮಾನಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಸಾಣಿಕೊಪ್ಪ, ಉಪಪ್ರಾಂಶುಪಾಲರಾದ ಡಾ. ಪ್ರಭಾಕರ್ ಸಾಹೇ ವಿವಿ ಪರೀಕ್ಷಾಂಗ ನಿಯಂತ್ರಕರಾದ ಡಾ.ಗುರುಶಂಕರ್, ಸಿಇಓ ಡಾ.ಕಿರಣ್ ಕುಮಾರ್ ಸೇರಿದಂತೆ ವಿವಿದ ವಿಭಾಗಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!