ಸಮರ್ಪಕ ಬರ ನಿರ್ವಹಣೆ – ಸಮಸ್ಯಾತ್ಮಕ ಪ್ರದೇಶಗಳಿಗೆ ಭೇಟಿ ನೀಡಲು ಜಿಲ್ಲಾಧಿಕಾರಿ ಸೂಚನೆ

 

 

ಸಮರ್ಪಕ ಬರ ನಿರ್ವಹಣೆ – ಸಮಸ್ಯಾತ್ಮಕ ಪ್ರದೇಶಗಳಿಗೆ
ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಲು ಜಿಲ್ಲಾಧಿಕಾರಿ ಸೂಚನೆ
ತುಮಕೂರು:

ತುಮಕೂರು ಜಿಲ್ಲೆಯನ್ನು
ಬರಪೀಡಿತವೆಂದು ರಾಜ್ಯ ಸರ್ಕಾರವು ಘೋಷಿಸಿರುವ ಹಿನ್ನೆಲೆಯಲ್ಲಿ ಬರ
ನಿರ್ವಹಣೆಯನ್ನು ಸಮರ್ಪಕವಾಗಿ ನಿಭಾಯಿಬೇಕಿದ್ದು, ಈ ನಿಟ್ಟಿನಲ್ಲಿ
ಕುಡಿಯುವ ನೀರು ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳು
ಹಾಗೂ ಮೇವು ಬ್ಯಾಂಕ್ ಸ್ಥಾಪನೆಗೊಂಡ ಪ್ರದೇಶಗಳು
ಸೇರಿದಂತೆ ಸಮಸ್ಯಾತ್ಮಕ ಪ್ರದೇಶಗಳಿಗೆ ಅಧಿಕಾರಿಗಳು ಆಗಾಗ್ಗೆ
ಖುದ್ದು ಭೇಟಿ ನೀಡಿ, ಪರಿಶೀಲನೆ ನಡೆಸಿ ಎಂದು ಜಿಲ್ಲಾಧಿಕಾರಿಗಳು
ಅಧಿಕಾರಿಗಳಿಗೆ ಸೂಚಿಸಿದರು.
ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ
ನಡೆದ ಜಿಲ್ಲಾ ಮಟ್ಟದ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ
ವಹಿಸಿ ಮಾತನಾಡಿದರು.

 


ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೀರು ಪೂರೈಕೆ
ಅವಧಿ, ಸುಸ್ಥಿತಿಯಲ್ಲಿರುವ ಕೊಳವೆ ಬಾವಿಗಳ ಸಂಖ್ಯೆ, ಬತ್ತಿ
ಹೋಗಿರುವ ಕೊಳವೆ ಬಾವಿ, ದುರಸ್ತಿಯಲ್ಲಿರುವ ಕೊಳವೆ
ಬಾವಿಗಳು, ಖಾಸಗಿ ಕೊಳವೆಬಾವಿಗಳಿಂದ ನೀರು ಪಡೆಯುತ್ತಿರುವ
ಗ್ರಾಮಗಳು ಸೇರಿದಂತೆ ಮೊದಲಾದ ಮಾಹಿತಿ ಪಡೆದ ಅವರು,
ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ
ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು ಎಂದರು.
ಜಿಲ್ಲೆಯಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ
ನಿಟ್ಟಿನಲ್ಲಿ ಈಗಾಗಲೇ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಲ್ಲಿಸಿದ ಎಲ್ಲಾ
ಕಾಮಗಾರಿಗಳಿಗೆ ಜಿಲ್ಲಾ ಮಟ್ಟದಲ್ಲಿ ಅನುಮೋದನೆ ನೀಡಲಾಗಿದ್ದು, ಎನ್‍ಡಿ
ಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್ ಯೋಜನೆಗಳನ್ನು ಸಮರ್ಪಕವಾಗಿ
ಬಳಸಿಕೊಂಡು ಅಧಿಕಾರಿಗಳು ಕಾರ್ಯೋನ್ಮುಖವಾಗಿ ಕುಡಿಯುವ
ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಸಮಸ್ಯೆಗಳನ್ನು
ನಿವಾರಿಸಲು ಕಾಮಗಾರಿಗಳನ್ನು ತ್ವರಿತವಾಗಿ
ಅನುಷ್ಠಾನಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಅಗತ್ಯ ವಿರುವ ಕಡೆ ಖಾಸಗಿ ಕೊಳವೆ ಬಾವಿಗಳು,
ಟ್ಯಾಂಕರ್‍ಗಳ ಮೂಲಕ ಸಮರ್ಪಕವಾಗಿ ಕುಡಿಯುವ ನೀರು
ಪೂರೈಸಬೇಕು. ಬತ್ತಿ ಹೋದ ಕೊಳವೆ ಬಾವಿಗಳನ್ನು ಇನ್ನಷ್ಟು
ಆಳ ಕೊರೆಯಲು ಕ್ರಮಕೈಗೊಳ್ಳಬೇಕು, ಅವಶ್ಯಕತೆ
ಇರುವ ಕಡೆ ಕೊಳವೆ ಬಾವಿಗಳನ್ನು ಕೊರೆಯಲು ಈಗಾಗಲೇ
ಅನುಮತಿ ನೀಡಲಾಗಿದ್ದು, ಅವಶ್ಯಕತೆ ಇದ್ದಲ್ಲಿ ಸಮಸ್ಯಾತ್ಮಕ
ಗ್ರಾಮಗಳಲ್ಲಿ ಹೊಸ ಕೊಳವೆ ಬಾವಿ ಕೊರೆಯುವ ಸಂಬಂಧ
ಕಾರ್ಯಪಡೆ ಸಭೆಯಲ್ಲಿ ಅನಮೋದನೆ ಪಡೆದು

ಕ್ರಮವಹಿಸಬೇಕು. ಬರಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ,
ಮೇವಿನ ಕೊರತೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೂ
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಗಮನಕ್ಕೆ ತರಬೇಕು
ಎಂದು ಸೂಚಿಸಿದರು.
ನಿಗಧಿತ ಅವಧಿಯಲ್ಲಿ ವೆಚ್ಚ ಪಾವತಿಗೆ ಸೂಚನೆ :-
ಮೇವು ಬ್ಯಾಂಕ್, ಕುಡಿಯುವ ನೀರು ಮೊದಲಾದ
ಕಾರ್ಯಗಳಿಗಾಗಿ ಮಾಡಲಾದ ವೆಚ್ಚಗಳನ್ನು ಸಂಬಂಧಿಸಿದವರಿಗೆ
ನಿಗಧಿತ ಅವಧಿಯೊಳಗೆ ಪಾವತಿ ಮಾಡಬೇಕು. ಯಾವುದೇ
ಬಿಲ್ಲುಗಳನ್ನು ಅನಗತ್ಯ ಕಾರಣಗಳಿಗಾಗಿ ಬಾಕಿ
ಇಟ್ಟುಕೊಳ್ಳಬಾರದೆಂದು ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರಿಗೆ ಅರಿವು ಮೂಡಿಸಿ :-
ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಪ್ರತಿನಿತ್ಯ ಸಮರ್ಪಕ
ನೀರು ಪೂರೈಕೆಯಾಗುವಂತೆ ನೋಡಿಕೊಳ್ಳಬೇಕು.
ಕುಡಿಯುವ ನೀರು ಸಮಸ್ಯೆ ಇರುವ ಪ್ರದೇಶಗಳ ನಿವಾಸಿಗಳು
ನೀರನ್ನು ಸಣ್ಣ ಹಾಗೂ ದೊಡ್ಡ ಟ್ಯಾಂಕ್‍ಗಳಲ್ಲಿ ಸಂಗ್ರಹಿಸುತ್ತಾರೆ.
ಇಂತಹ ಸ್ಥಳಗಳಲ್ಲಿ ಅತೀ ಹೆಚ್ಚು ಸೊಳ್ಳೆಗಳು
ಉತ್ಪತ್ತಿಗೊಂಡು ಮಲೇರಿಯಾ, ಡೆಂಗ್ಯೂವಿನಂತಹ ಅನೇಕ
ಕಾಯಿಲೆಗಳು ಉಲ್ಭಣಗೊಳ್ಳುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ
ಕ್ರಮವಾಗಿ ಆರೋಗ್ಯ ಅಧಿಕಾರಿಗಳು ಸೇರಿದಂತೆ ಮತ್ತಿತರ
ತಾಲ್ಲೂಕು ಮಟ್ಟದ ಅಧಿಕಾರಿಗಳು ಅಂತಹ ಸ್ಥಳಗಳಿಗೆ ಭೇಟಿ ನೀಡಿ
ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಸೂಚಿಸಿದರು.
ಹೆಚ್ಚುವರಿ ಮೇವಿನ ಬ್ಯಾಂಕ್ ಸ್ಥಾಪನೆ :- ಹುಳಿಯಾರಿನಲ್ಲಿ ಮೇವಿನ ಬ್ಯಾಂಕ್ ಸ್ಥಾಪಿಸಲು ನಿರ್ಣಯಿಸಲಾಗಿದ್ದು,
ಜಿಲ್ಲೆಯಾದ್ಯಂತ ಹೆಚ್ಚುವರಿ ಮೇವಿನ ಬ್ಯಾಂಕ್ ಸ್ಥಾಪಿಸಲು ಅವಶ್ಯಕತೆ
ಇದ್ದಲ್ಲಿ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಣಾಧಿಕಾರಿಗಳು ಪರಿಶೀಲಿಸಿ
ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಹೊಸದಾಗಿ ಕೊರೆದ ಕೊಳವೆ ಬಾವಿಗಳಿಗೆ
ವಿದ್ಯುದ್ದೀಕರಣಗೊಳಿಸಿರುವ ಬಗ್ಗೆ ಮಾಹಿತಿ ಪಡೆದ ಅವರು, ಬಾಡಿಗೆ
ಆಧಾರದಲ್ಲಿ ಕುಡಿಯುವ ನೀರು ಪಡೆಯುತ್ತಿರುವ ಖಾಸಗಿ
ಕೊಳವೆ ಬಾವಿಗಳು ಸೇರಿ ಅಧೀನದಲ್ಲಿರುವ ಎಲ್ಲಾ ಕೊಳವೆ
ಬಾವಿಗಳಿಗೆ ಕಡ್ಡಾಯವಾಗಿ ನಿರಂತರ ಜ್ಯೋತಿಯಡಿ ವಿದ್ಯುತ್
ಸಂಪರ್ಕ ಕಲ್ಪಿಸಬೇಕು
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯತ್ ಮುಖ್ಯ
ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಸಮರ್ಪಕ ಬರ
ನಿರ್ವಹಣೆ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲಾ ಕಾಮಗಾರಿಗಳಿಗೆ
ಅನುಮೋದನೆ ನೀಡಲಾಗಿದ್ದು, ಇನ್ನು ಅವಶ್ಯಕತೆ ಇದ್ದಲ್ಲಿ
ತಾಲ್ಲೂಕು ಮಟ್ಟದ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದಲ್ಲಿ ತ್ವರಿತವಾಗಿ
ಅನುಮೋದನೆ ನೀಡಲು ಕ್ರಮಕೈಗೊಳ್ಳಲಾಗುವುದು
ಎಂದರು.
ಯಾವ ಕುಡಿಯುವ ನೀರು ಸಮಸ್ಯೆ ಇರುವ ಜನವಸತಿ
ಪ್ರದೇಶದಲ್ಲಿ 60ಕ್ಕಿಂತ ಹೆಚ್ಚು ಮನೆಗಳಿರುತ್ತವೋ ಅಂತಹ
ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು
ಮಾಡುತ್ತಿದ್ದಲ್ಲಿ, ಬದಲಿ ವ್ಯವಸ್ಥೆಯಾಗಿ ಕೊಳವೆ ಬಾವಿ ಮೂಲಕನೀರು ಪೂರೈಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು
ಅಧಿಕಾರಿಗಳಿಗೆ ಸೂಚಿಸಿದರು. ಸಮರ್ಪಕ ಕುಡಿಯುವ ನೀರು
ಪೂರೈಕೆ ನಿಟ್ಟಿನಲ್ಲಿ ಅನುಷ್ಟಾನಗೊಂಡ ಕಾಮಗಾರಿಗಳ ಬಗ್ಗೆ
ಭಾವಚಿತ್ರಗಳನ್ನು ಲಗತ್ತಿಸಿ ವರದಿಯನ್ನು ಸಲ್ಲಿಸುವಂತೆ
ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಉಪವಿಭಾಗಾಧಿಕಾರಿ
ಗೌರವ್ ಕುಮಾರ್ ಶೆಟ್ಟಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಗಿರೀಶ್
ರೆಡ್ಡಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಕಾರ್ಯಪಾಲಕ ಅಭಿಯಂತರ ರವೀಶ್, ಜಿಲ್ಲಾಧಿಕಾರಿ ಕಚೇರಿ
ಸಹಾಯಕ ಮೋಹನ್ ಕುಮಾರ್, ಸೇರಿದಂತೆ ಎಲ್ಲಾ ಜಿಲ್ಲಾ/ತಾಲ್ಲೂಕು
ಮಟ್ಟದ ಅಧಿಕಾರಿಗಳು ಹಾಜರಿದ್ದರು. ************

Leave a Reply

Your email address will not be published. Required fields are marked *