ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ವಿದ್ಯಾರ್ಥಿನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರಿಕ್ಷೆಗಳು ಮತ್ತು ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಧುಗಿರಿ ಉಪವಿಭಾಗಾಧಿಕಾರಿಗಳಾದ ಶ್ರೀ ಗೋಟೂರು ಶಿವಪ್ಪನವರು ಮಾತನಾಡಿದರು.

ಹಿಂದುಳಿದ ವರ್ಗಗಳ ಕಲ್ಯಾಣಾ ಇಲಾಖೆಯಿಂದ ಮಕ್ಕಳಿಗೆ ಸ್ಪರ್ಧಾತ್ಮಕ ಮನೋಭಾವ ಭಿತ್ತುವ ಕೆಲಸ ಮಾಡುತ್ತಿದ್ದು ವಿದ್ಯಾರ್ಥಿಗಳೆಲ್ಲರೂ ಇಲಾಖೆಯ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಅಧಿಕಾರಿಗಳಾಗಿ ಸೇವೆ ಸಲ್ಲಿಸಬೇಕು. ನಾನೂ ಕೂಡ ಹಿಂದಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಲದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿ ಎಂದು ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಯಾವುದೇ ಜಾತಿ, ಧರ್ಮ, ಸ್ಥಳಗಳ ಬೇಧಭಾವಗಳು ಇರುವುದಿಲ್ಲ ಎಲ್ಲಾರು ಮುಕ್ತವಾಗಿ ಬರೆಯಬಹುದು ಎಂದು ತಿಳಿಸಿದರು.
ಪ್ರಾಸ್ತಾವಿಕ ಮಾತುಗಳಾಡಿದ ಕಲ್ಯಾಣಾಧಿಕಾರಿಗಳಾದ ಕೆ ಎಂ ಜಯರಾಮರವರು ಇಲಾಖೆಯಿಂದ ನೀಡುತ್ತಿರುವ ಸೌಲಭ್ಯಗಳನ್ನು ಕುರಿತು ಸಮಗ್ರ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದ ಶ್ರೀಮತಿ ವೇದಲಕ್ಷ್ಮೀ ಜಿ ರವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇತಿಹಾಸದ ವಿಷಯದಿಂದ ಯಾವ ರೀತಿಯ ಪ್ರಶ್ನೆಗಳನ್ನು ಕೇಳುತ್ತಾರೆ ಎಂದು ಸಮಗ್ರವಾಗಿ ಮಂಡಿಸಿದರು.
ಸಹಾಯಕ ಪ್ರಾಧ್ಯಾಪಕರಾದ ಶ್ರೀ ಮಂಜುನಾಥ ಬಿ ರವರು ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ಪೂರ್ವ ಸಿದ್ದತೆ ಎಂಬ ವಿಷಯದ ಬಗ್ಗೆ ಮಾತನಾಡುತ್ತ ಸಾಧನೆ ಎಂಬುದು ಸಮಗ್ರವಾಗಿ ಮತ್ತು ನಿರಂತರವಾಗಿ ಅಧ್ಯಯನ ಮಾಡಿದರೆ ಮಾತ್ರ ದಕ್ಕುವಂತದ್ದು ಎಂದು ತಿಳಿಸಿದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಚನ್ನಕೇಶವ ಮೂರ್ತಿಯವರು ವೈಜ್ಞಾನಿಕ ಕೃಷಿ ಮತ್ತು ಸಾವಯವ ಕೃಷಿಯ ಬಗ್ಗೆ ಮಾತನಾಡಿದರು. ಸಿಡಿಪಿಒ ರವರಾದ ಶ್ರೀ ಕುಮಾರ್ ನಾಯಕ್ ರವರು ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳು ಮತ್ತು ಪೊಕ್ಸಾ ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಈ ಸಮಯದಲ್ಲಿ ಕಛೇರಿ ಸಿಬ್ಬಂದಿಗಳಾದ ಓಬಳೇಶ , ಅಂಜನ್ ಕುಮಾರ್, ಲಕ್ಷ್ಮಿ ರಂಗನಾಥ ಹಾಗೂ ವಾರ್ಡನ್ ಗಳಾದ ರಾಮಮೋಹನ್, ಹೈದರಾಲಿ, ಸಣ್ಣಪ್ಪ, ಅಕ್ಕಮ್ಮ, ಅರುಣಾ ಕುಮಾರಿ, ಲಕ್ಷ್ಮೀ, ಮೀನಾಕ್ಷಮ್ಮ ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.