ತುಮಕೂರು ಜಿಲ್ಲೆಯ ರೈತರಿಗೆ ಮರಣ ಶಾಸನವಾಗಿರುವ ಅವೈಜ್ಞಾನಿಕ ಎಕ್ಸ್ಪ್ರೆಸ್ ಲಿಂಕ್ ಕೆನಲ್ ಕಾಮಗಾರಿಯನ್ನು ಸ್ಥಗಿತಗೋಳಿಸುವಂತೆ ಹಲವಾರು ರೈತಪರ ಹೋರಾಟಗಾರರ ಚಳುವಳಿಯ ಪ್ರತಿಫಲವಾಗಿ ಒಂದು ವರ್ಷದ ಹಿಂದೆ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು ಅದರೆ ಇತ್ತೀಚೆಗೆ ರಾಜ್ಯದಲ್ಲಿ ಡಿ,ಕೆ ಶಿವಕುಮಾರ್ ರವರು ನೂತನ ಮುಖ್ಯಮಂತ್ರಿಯಾದ ತಕ್ಷಣವೇ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಅವೈಜ್ಞಾನಿಕವಾದ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ಪ್ರಾರಂಭಿಸಲು ಮುಂದಾಗಿರುವುದು ಖಂಡನೀಯ ಎಂದು ಜೆಡಿಎಸ್ ಮುಖಂಡ ಬಿ, ಎಸ್, ನಾಗರಾಜು ತಿಳಿಸಿದರು.
ಈ ಕುರಿತಾಗಿ ಗುಬ್ಬಿ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು ಕುಣಿಗಲ್ ನ ರೈತರಿಗೆ ನೀರು ಹರಿಸಲು ನಮ್ಮ ಅಭ್ಯಂತರವೇನಿಲ್ಲ ಈಗಿರುವ ನಾಲೆಯನ್ನು ಅಗಲೀಕರಣ ಮಾಡಿ ನೀರನ್ನು ತೆಗೆದುಕೊಂಡು ಹೋಗುವುದು ಸೂಕ್ತ ಇದಕ್ಕೆ ಈ ಭಾಗದ ರೈತರು ಸಹಮತ ನೀಡುತ್ತಾರೆ ಆದರೆ ಎಕ್ಸ್ಪ್ರೆಸ್ ಲಿಂಕ್ ಕ್ಯಾನಲ್ ಮೂಲಕ ನೀರನ್ನು ತೆಗೆದುಕೊಂಡು ಹೋಗಿ ಈ ಭಾಗದ ರೈತರ ಸಮಾಧಿ ಮಾಡುವುದು ಎಷ್ಟು ಸಮಂಜಸ ಎಂದು ತಿಳಿಸಿದ ಅವರು ಗುಬ್ಬಿ ವಿಧಾನ ಸಭಾ ಕ್ಷೇತ್ರದ ಶಾಸಕರು ಮೊದಲ ಹಂತದ ಸಚಿವ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಕೈತಪ್ಪಿದೆ ಹಾಗಾಗಿ ಎರಡನೇ ಬಾರಿಯಾದರೂ ನನಗೆ ಸಚಿವ ಸ್ಥಾನ ಸಿಗಲಿ ಎಂಬ ಉದ್ದೇಶದಿಂದ ಎಕ್ಸ್ಪ್ರೆಸ್ ಲಿಂಕ್ ಕೆನಲ್ ಕಾಮಗಾರಿಗೆ ನನ್ನ ವಿರೋಧವಿದೆಯೆಂದು ಮಾಧ್ಯಮದ ಮುಂದೆ ಹೇಳಿಕೆ ನೀಡಿರುವುದು ಹಾಸ್ಯಾಸ್ಪದವಾಗಿದೆ ನಿಜವಾಗಿಯೂ ಗುಬ್ಬಿ ತಾಲೂಕಿನ ರೈತರ ಮೇಲೆ ಕಾಳಜಿ ಇದ್ದರೆ ಶಾಸಕರು ಎಕ್ಸ್ಪ್ರೆಸ್ ಲಿಂಕ್ ಕ್ಯಾನಲ್ ವಿರುದ್ಧ ಹೋರಾಟಕ್ಕೆ ಮುಂದಾಗಲಿ ನಾವು ಸಹ ಅವರ ಬೆಂಬಲಕ್ಕೆ ನಿಲ್ಲುತ್ತೇವೆ ಅವರ ಮುಂದಾಳತ್ವದಲ್ಲಿ ನಾವು ಹೋರಾಟಕ್ಕೆ ನಿಲ್ಲುತ್ತೇವೆ ಎಂದು ತಿಳಿಸಿದರು.
ಬಿಜೆಪಿ ಮುಖಂಡ ಎಸ್ ಡಿ ದಿಲೀಪ್ ಕುಮಾರ್ ಮಾತನಾಡಿ ರೈತರು, ಮತ್ತು ಸಾರ್ವಜನಿಕರ ತೀವ್ರ ಹೋರಾಟದ ಫಲವಾಗಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡುತ್ತಿದ್ದ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯಿಂದ ಹಿಂದೆ ಸರಿದಿದ್ದ ಸರ್ಕಾರ ಈಗ ಮತ್ತೊಮ್ಮೆ ಲಿಂಕ್ ಕೆನಾಲ್ ಕಾಮಗಾರಿ ಪ್ರಾರಂಭಿಸಲು ಮುಂದಾಗಿರುವುದನ್ನು ಹೇಮಾವತಿ ಹೋರಾಟ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಅವೈಜ್ಞಾನಿಕವಾಗಿ ಎಕ್ಸ್ಪ್ರೆಸ್ ಲಿಂಕ್ ಕೆನಲ್ ಮೂಲಕ
ಕುಣಿಗಲ್, ಮಾಗಡಿ,ರಾಮನಗರಕ್ಕೆ ಹೇಮಾವತಿ ನೀರು ತೆಗೆದುಕೊಂಡು ಹೋಗಲು ಮೂಲ ನಾಲೆಯ ನಿಯಮಗಳನ್ನೇ ಉಲ್ಲಂಘಿಸಿ, ತುಮಕೂರು ಜಿಲ್ಲೆಯ ಸುಮಾರು ಏಳು ತಾಲೂಕುಗಳಿಗೆ ನೀರಿಲ್ಲದಂತೆ ಮಾಡುವ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಗೆ ತುಮಕೂರು ಜಿಲ್ಲೆಯ ಜನರ ಸಂಪೂರ್ಣ ವಿರೋಧವಿದ್ದರೂ ಸಹ ಉಪಮುಖ್ಯಮಂತ್ರಿಗಳು ರೈತರ ಮನವೊಲಿಸಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ನ ಕಾಮಗಾರಿಯನ್ನು ಪ್ರಾರಂಭಿಸುವುದಾಗಿ ಮಾತನಾಡುತ್ತಿರುವುದು ತರವಲ್ಲ. ಇದನ್ನು ವಿರೋಧಿಸಿ ಮತ್ತೊಮ್ಮೆ ನಾವು ಹೋರಾಟಕ್ಕೆ ಇಳಿಯುವುದು ಅನಿವಾರ್ಯ
ಈಗಾಗಲೇ ನಾವು ಈ ವಿಚಾರವಾಗಿ ಕಾನೂನಿನ ಮರೆಹೋಗಿದ್ದು ಕಾನೂನಿನ ಹೋರಾಟವನ್ನು ಸಹ ಮಾಡುತ್ತಿದ್ದೇವೆ ಕಾನೂನಿನ ಹೋರಾಟದ ಜೊತೆಯಲ್ಲಿ ಎಕ್ಸ್ಪ್ರೆಸ್ ಲಿಂಕ್ ಕೆನಲ್ ಕಾಮಗಾರಿಯನ್ನು ಪ್ರಾರಂಭಿಸಲು ಸರ್ಕಾರ ಮುಂದಾದರೆ ನಮ್ಮ ಹೋರಾಟ ಉಗ್ರವಾಗಿರುತ್ತದೆ ನಾವು ಜೈಲ್ ಬರೋ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ತಿಳಿಸಿದರು.
ಕಳೆದ ಎರಡು ಮೂರು ವರ್ಷಗಳ ಅಂಕಿ ಅಂಶಗಳನ್ನು ಪರಿಶೀಲಿಸಿದರೆ,ಹೇಮಾವತಿ ನಾಲೆಯಿಂದ ಕುಣಿಗಲ್ ತಾಲೂಕಿಗೆ ಹರಿಯಬೇಕಾಗಿದ್ದ 3.05 ಟಿ.ಎಂ.ಸಿ ನೀರಿಗಿಂತಲೂ ಹೆಚ್ಚು ನೀರು ಹರಿದಿದೆ.ಒಂದು ವೇಳೆ ನಿಗಧಿತ ನೀರು ಬಂದಿಲ್ಲವೆಂದಾದರೆ, ಈಗಾಗಲೇ ಆಗಲೀಕರಣಗೊಂಡಿರುವ ನಾಲೆಯನ್ನು ಮತ್ತಷ್ಟು ಆಗಲ ಮಾಡಿ ತೆಗೆದುಕೊಂಡು ಹೋಗಲು ಯಾರ ಅಭ್ಯಂತರವೂ ಇಲ್ಲ.ಆದರೆ ಕುಣಿಗಲ್ ಹೆಸರಿನಲ್ಲಿ ರಾಮನಗರ, ಮಾಗಡಿ ತಾಲೂಕಿಗೆ ನೀರು ತೆಗೆದುಕೊಂಡು ಹೋಗಲು ನಮ್ಮ ವಿರೋಧವಿದೆ.ಈ ಯೋಜನೆಯಿಂದ ಕುಣಿಗಲ್ ತಾಲೂಕಿನ ಜನರಿಗೂ ಯಾವುದೇ ಪ್ರಯೋಜನವಾಗದು.ಇದನ್ನು ಕುಣಿಗಲ್ ತಾಲೂಕಿನ ಜನರು ಅರ್ಥ ಮಾಡಿಕೊಳ್ಳಬೇಕು.ಶಾಸಕ ಹೆಚ್.ಡಿ.ರಂಗನಾಥ್ ಅವರು ಜನರನ್ನು ಎತ್ತಿಕಟ್ಟುವ ಹುನ್ನಾರಕ್ಕೆ ಯಾರು ಬಲಿಯಾಗಬಾರದು ಎಂದು ಎ.ಗೋವಿಂದರಾಜು ಮನವಿ ಮಾಡಿದ್ದಾರು.
ರಾಜ್ಯದ ಉಪಮುಖ್ಯಮಂತ್ರಿಗಳಾಗಿರುವ ಕೊರಟಗೆರೆ ಶಾಸಕರು, ತಾವು ಉಪಮುಖ್ಯಮಂತ್ರಿಯಾಗಲು ಮತ ನೀಡಿ, ಗೆಲುವು ತಂದಕೊಟ್ಟ ಜನರನ್ನು ತಿರಸ್ಕಾರ ಮಾಡಿ, ಸರ್ಕಾರದ ಭಾಗ ಎಂಬ ಮುಲಾಜಿಗೆ ಒಳಗಾಗಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಗೆ ಬೆಂಬಲ ವ್ಯಕ್ತಪಡಿಸಿರುವುದು ಸರಿಯಲ್ಲ.
ಈ ಕಾಮಗಾರಿಯಿಂದ ಜಿಲ್ಲೆಯ ಗುಬ್ಬಿ, ಮಧುಗಿರಿ, ಕೊರಟಗೆರೆ, ತುಮಕೂರು ನಗರ ಮತ್ತು ತುಮಕೂರು ಗ್ರಾಮಾಂತರ ಕ್ಷೇತ್ರಗಳ ಜನರಿಗೆ ತೀವ್ರ ತೊಂದರೆಯಾಗಲಿದೆ. ಇದರ ಅರಿವಿದ್ದು, ತಾವು ತಮ್ಮ ಕುರ್ಚಿ ಉಳಿಸಿಕೊಳ್ಳಲು ಕಾಮಗಾರಿಗಾಗಿ ಜನರ ಮನವೊಲಿಸುತ್ತೇವೆ ಎಂದು ಮಾತನಾಡುತ್ತಿರುವುದು ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರುವಂತಹದ್ದಲ್ಲ.ಡಾ.ಜಿ.ಪರಮೇಶ್ವರ್ ಅವರ ಈ ಹೇಳಿಕೆ,ಇಡೀ ಜಿಲ್ಲೆಯ ಜನತೆಯ ನಂಬಿಕೆಗೆ ಧಕ್ಕೆ ತರುವಂತಿದೆ. ತಾವು ಮತ್ತೊಮ್ಮೆ ಈ ನಿರ್ಧಾರವನ್ನು ಮರು ಪರಿಶೀಲನೆ ನಡೆಸಬೇಕು.ಇಲ್ಲದಿದ್ದರೆ ನಿಮ್ಮ ವಿರುದ್ದವೂ ಜಿಲ್ಲೆಯ ಜನ ಬೀದಿಗೆ ಇಳಿಯಬೇಕಾದ ಅನಿವಾರ್ಯ ಸೃಷ್ಟಿಯಾಗಲಿದೆ ಎಂದು ಎಚ್ಚರಿಸಿದ್ದಾರೆ.
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಈ ಹೇಳಿಕೆ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯ ಜನರಲ್ಲಿ ಆತಂಕ ಉಂಟಾಗಿದೆ. ಮುಂದಿನ ಹೋರಾಟದ ರೂಪುರೇಷನ್‌ಗಳ ಕುರಿತು ಚರ್ಚಿಸಲು ರೈತ ಸಂಘ,ಸಂಯುಕ್ತ ಕಿಸಾನ್ ಹೋರಾಟ ಸೇರಿದಂತೆ ಎಲ್ಲಾ ಸಂಘ,ಸಂಸ್ಥೆಗಳ ಸಭೆಯನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ನೀವು ಕಾಮಗಾರಿ ನಡೆಸಲು ಮುಂದಾದರೆ ಜಿಲ್ಲೆಯ ಜನರು ಎಲ್ಲಾ ರೀತಿಯ ಹೋರಾಟಕ್ಕೂ ಸಿದ್ದರಾಗಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪೂರ್ವಭಾವಿ ಸಭೆಯಲ್ಲಿ ರೈತ ಹೋರಾಟಗಾರರಾದ ಪಿ,ಬಿ ಚಂದ್ರಶೇಖರ್ ಬಾಬು, ಕಳ್ಳಿಪಾಳ್ಯ ಲೋಕೇಶ್, ಎಚ್ ಟಿ ಭೈರಪ್ಪ, ಸುರೇಶ್ ಗೌಡ, ಹೊನ್ನಗಿರಿಗೌಡ, ಬಲರಾಮಣ್ಣ, ಶಂಕರ್ ಕುಮಾರ್, ವಿದ್ಯಾಸಾಗರ್, ಹರವೆಸಂದ್ರ ಲೋಕೇಶ್, ಸೇರಿದಂತೆ ತಾಲೂಕಿನ ಹಲವು ಗ್ರಾಮಗಳ ರೈತ ಮುಖಂಡರು ಹೋರಾಟಗಾರರು ಉಪಸ್ಥಿತರಿದ್ದರು.