ಗುಬ್ಬಿ ಸುದ್ದಿ
2024-25 ನೇ ಸಾಲಿಗೆ ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿ ಗೆ ಪ್ರವೇಶ ಕಲ್ಪಿಸಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಕೊಡಲಾಗಿದ್ದು,
ಮೇ 09 ರಿಂದ ಮೇ 21 ರ ವರೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಯನ್ನು ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ತುಮಕೂರು ಜಿಲ್ಲೆ ಇವರ ಕಚೇರಿಗೆ (*ವಿದ್ಯಾರ್ಥಿಯ ಆಧಾರ್ ಕಾರ್ಡ್, ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿಯ 5ನೇ ತರಗತಿಯ ಮಾರ್ಕ್ಸ್ ಕಾರ್ಡ್, ವಿದ್ಯಾರ್ಥಿಯ ಪೋಟೋ, ಮೊಬೈಲ್ ನಂಬರ್*) ಅಗತ್ಯ ದಾಖಲಾತಿಗಳೊಂದಿಗೆ ತೆರಳಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಇದರ ಸದುಪಯೋಗ ಮಾಡಿಕೊಳ್ಳಲು
ಗುಬ್ಬಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ ಪತ್ರಿಕಾ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.