ಪೂಜ್ಯ ವೀರೇಂದ್ರ ಹೆಗ್ಗಡೆಯವರಿಂದ ರೂ. 50,000/- ಮೊತ್ತದ ಪ್ರಸಾದ ರೂಪದ ಡಿಡಿ ಮಂಜೂರಾತಿ

ಗುಬ್ಬಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಪ್ಪ ವಲಯದ ಕೋಣೆ ಮಾದೇನಹಳ್ಳಿ ಗ್ರಾಮದಲ್ಲಿ ನಿರ್ಮಾಣ ವಾಗುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ದೇವಾಲಯ ಜೇಣೋದ್ಧಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ರೂ. 50,000/- ಮೊತ್ತದ ಪ್ರಸಾದ ರೂಪದ ಡಿಡಿ ಮಂಜೂರಾತಿ ನೀಡಿದ್ದು,

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ರಾಜೇಶ್. ಎಸ್ ರವರು ದೇವಾಲಯ ಸಮಿತಿಯ ಪದಾಧಿಕಾರಿಗಳಿಗೆ ಡಿಡಿ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಪಾತಯ್ಯ, ಹಾಗೂ ಎಲ್ಲ ಪದಾಧಿಕಾರಿಗಳು ಗ್ರಾಮ ಪಂಚಾಯಿತಿ ಸದಸ್ಯರುಗಳು, ಕೊಪ್ಪ ವಲಯದ ಮೇಲ್ವಿಚಾರಕರಾದ, ಗಾಯಿತ್ರಿ ಮತ್ತು ಸೇವಾ ಪ್ರತಿನಿಧಿ ಕಾಳಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.

Leave a Reply

Your email address will not be published. Required fields are marked *