ಸ್ಥಳ ಭೇಟಿ ಮೂಲಕ ಪ.ಜಾತಿ/ಪ.ಪಂಗಡ ಸಮುದಾಯಗಳ ಸಮಸ್ಯೆ ಪರಿಹರಿಸಿ :ಜಿಲ್ಲಾಧಿಕಾರಿ ಶುಭ ಕಲ್ಯಾಣ್
ತುಮಕೂರು: ಪ.ಜಾತಿ/ಪ.ಪಂಗಡ ಸಮುದಾಯಗಳ ಸಮಸ್ಯೆಗಳನ್ನು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ದೊರಕಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಪ.ಜಾತಿ ಮತ್ತು ಪ.ಪಂಗಡಗಳ ಕುಂದು ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ.ಜಾತಿ ಮತ್ತು ಪ.ಪಂಗಡಗಳ ಸ್ಮಶಾನ ಭೂಮಿ ಅಭಿವೃದ್ಧಿ, ನಿವೇಶನ ಹಂಚಿಕೆ, ಸಾಗುವಳಿ ಚೀಟಿ, ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಕುಂದು…