ಸೆ.14ರಂದು ರಾಷ್ಟ್ರೀಯ ಲೋಕ್ ಆದಾಲತ್
ತುಮಕೂರು: ಜಿಲ್ಲೆಯ ವಿವಿಧ ನ್ಯಾಯಲಯಗಳಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದುಕೊಂಡಿರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸುವ ಉದ್ದೇಶದಿಂದ ಸೆಪ್ಟಂಬರ್ 14ರಂದು ರಾಷ್ಟ್ರೀಯ ಲೋಕ್ ಆದಾಲತ್ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್ ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು…