ಜಿಲ್ಲೆಗೆ ಹೇಮಾವತಿ ನೀರು ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಧಿಕಾರಿಗಳು ಮನವಿ
ತುಮಕೂರು: ಹೇಮಾವತಿ ಜಲಾಶಯದಿಂದ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ ಕೆರೆ ಕೆಟ್ಟೆಗಳನ್ನು ತುಂಬಿಸಲು ನೀರು ಹರಿಸಲಾಗುತ್ತಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ತುಮಕೂರು ಶಾಖಾ ಕಾಲುವೆಗೆ ನೀರು ಹರಿದಿದ್ದು, ತಿಪಟೂರು ತಾಲ್ಲೂಕು ಗಂಗನಘಟ್ಟವನ್ನು ತಲುಪಿದೆ. ಜಲಾಶಯದ ಒಳಹರಿವಿನ ಪ್ರಮಾಣ ಯಾವುದೇ ಸಮಯದಲ್ಲಾದರೂ ಏರಿಕೆಯಾಗುವ ಸಂಭವವಿದ್ದು, ಹೆಚ್ಚುವರಿ ನೀರನ್ನು ನಾಲೆಗೆ ಬಿಡುವುದರಿಂದ ಸಾರ್ವಜನಿಕರು ನಾಲೆಯ ಅಕ್ಕ-ಪಕ್ಕ ಸುಳಿದಾಡಬಾರದು ಹಾಗೂ ಈಜಲು, ಜಾನುವಾರುಗಳಿಗೆ ನೀರು ಕುಡಿಸಲು, ಬಟ್ಟೆ ಒಗೆಯಲು, ಮತ್ತಿತರ ಕಾರಣಗಳಿಗಾಗಿ ನಾಲೆ ಬಳಿಗೆ…