ನಗರದಲ್ಲಿ 39ನೇ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ: ಆ.3ರಿಂದ ಮಕ್ಕಳು, ಹಿರಿಯರಿಗೆ ವಿವಿಧ ಸ್ಪರ್ಧೆ ಆಯೋಜನೆ
ತುಮಕೂರು: ನಗರದ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಬರುವ ಆಗಸ್ಟ್ 17ರಂದು ನಗರದ ಕೆ.ಆರ್.ಬಡಾವಣೆಯ ಶ್ರೀರಾಮ ಮಂದಿರದಲ್ಲಿ 39ನೇ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಅಂಗವಾಗಿ ಆಗಸ್ಟ್ 3ರಿಂದ ವಿವಿಧ ವಯೋಮಾನದವರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಸಮಿತಿ ಉಪಾಧ್ಯಕ್ಷ ಜಿ.ಎಸ್.ಬಸವರಾಜು ಹೇಳಿದರು. ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಮ್ಮ ಸಂಸ್ಕøತಿ, ಆಚಾರವಿಚಾರಗಳ ಮಹತ್ವವನ್ನು ಮುಂದಿನ ತಲೆಮಾರಿನವರಿಗೆ ಪರಿಚಯಿಸಿ ಆಸಕ್ತಿ ಮೂಡಿಸಲು ಕಳೆದ 38 ವರ್ಷಗಳಿಂದ ಶ್ರೀ ಕೃಷ್ಣ…