ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಪಡಿಸಬೇಕು : ಡಾ: ಜಿ. ಪರಮೇಶ್ವರ್
ತುಮಕೂರು: ಗ್ರಾಮೀಣ ಪ್ರದೇಶಗಳನ್ನು ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಅಭಿವೃದ್ಧಿಪಡಿಸಿದಾಗ ಮಾತ್ರ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಹೊರವಲಯದ ಹೆಗ್ಗೆರೆ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಗುರುವಾರ ನಡೆದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಆಶಯದಂತೆ ಸ್ಥಳೀಯ ಆಡಳಿತವನ್ನು ಬಲಗೊಳಿಸಲು ಗ್ರಾಮ…