ಸಾರ್ವಜನಿಕರಿಗೆ ಅಗತ್ಯವಿರುವ ಬಸ್ ಸೌಕರ್ಯ ಕಲ್ಪಿಸುವ ಗುರಿ ಎಸ್ ಆರ್ ಶ್ರೀನಿವಾಸ್
ಗುಬ್ಬಿ ಪಟ್ಟಣದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿ ಸಾರ್ವಜನಿಕರಿಗೆ ಅಗತ್ಯವಿರುವ ಬಸ್ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಶಾಸಕ ಎಸ್ ಆರ್ ಶ್ರೀನಿವಾಸ್ ರವರು ಕೆ ಎಸ್ ಆರ್ ಟಿ ಸಿ ಉನ್ನತ ಅಧಿಕಾರಿಗಳೊಂದಿಗೆ ಬುಧವಾರ ಬಸ್ ನಿಲ್ದಾಣಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಟ್ಟಣದ ಬಸ್ ನಿಲ್ದಾಣದಲ್ಲಿ ಇರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸುವಂತೆ ಅಧಿಕಾರಿಗೆ ತಿಳಿಸಲಾಗಿದೆ. ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲು…