ಜೀವಸಂಕುಲ ಉಳಿವಿಗೆ ಪರಿಸರ ಸಂರಕ್ಷಣೆ ಅತ್ಯಗತ್ಯ: ಅನಿತಾ
ತುರುವೇಕೆರೆ: ತಾಲೂಕಿನ ಕೊಂಡಜ್ಜಿ ವಲಯದ ಮಾಚೇನಹಳ್ಳಿ ಕಾರ್ಯಕ್ಷೇತ್ರದ ಬಾಪೂಜಿ ಕೇಂದ್ರೀ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಪರಿಸರ ದಿನಾಚರಣೆ ಆಚರಿಸಲಾಯಿತು. ಮಹಿಳಾ ಒಕ್ಕೂಟದ ಅಧ್ಯಕ್ಷೆ ಅನಿತಾ ಮಾತನಾಡಿ, ಮಗುವಿನ ಪೋಷಣೆಯಲ್ಲಿ ತಾಯಿಯ ಪಾತ್ರ ಎಷ್ಟು ಮಹತ್ವದ್ದೋ, ಜೀವ ಸಂಕುಲದ ಉಳಿವಿನಲ್ಲಿ ಪರಿಸರದ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಪರಿಸರ ಸಂರಕ್ಷಿಸಿ ತಮ್ಮ ಜವಾಬ್ದಾರಿ ನಿರ್ವಹಿಸಬೇಕಿದೆ ಎಂದರು. ಯೋಜನಾಧಿಕಾರಿ ಅನಿತಾಶೆಟ್ಟಿ ಮಾತನಾಡಿ, ಧರ್ಮಸ್ಥಳ ಸಂಸ್ಥೆಯು…