ಶಾಲಾ-ಕಾಲೇಜುಗಳ ಆವರಣ ಸ್ವಚ್ಛವಾಗಿಡಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
ತುಮಕೂರು : ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಹಗಲು ಹೊತ್ತಿನಲ್ಲಿ ರೋಗಗಳನ್ನು ಹರಡುವಂತಹ ಸೊಳ್ಳೆಗಳ ಕಡಿತದಿಂದ ಮಕ್ಕಳಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುವ ಕಾರಣ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳ ಕೊಠಡಿಗಳನ್ನು ಪರಿಶೀಲಿಸಿ ಸ್ವಚ್ಛತೆ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ವೀಡಿಯೋ ಕಾನ್ಪೆರೆನ್ಸ್ ಸಭಾಂಗಣದಲ್ಲಿ ನಡೆದ ‘ಮುಂಗಾರು ಹಾಗೂ ಬರ ನಿರ್ವಹಣೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು…