ಹುಟ್ಟಿದ ಮೇಲೆ ಸಮಾಜಕ್ಕೆ ಏನಾದರೂ ಕೊಡುಗೆಯನ್ನು ಕೊಟ್ಟಾಗ ಮಾತ್ರ ಮನುಷ್ಯನ ಬದುಕು ಸಾರ್ಥಕವಾಗುತ್ತದೆ ಕಾರದ ವೀರ ಬಸವೇಶ್ವರ ಸ್ವಾಮೀಜಿ.
ಗುಬ್ಬಿ : ಪ್ರತಿಯೊಬ್ಬ ಮನುಷ್ಯನು ಹುಟ್ಟಿದ ಮೇಲೆ ಸಮಾಜಕ್ಕೆ ಏನಾದರೂ ಕೊಡುಗೆಯನ್ನು ಕೊಟ್ಟಾಗ ಮಾತ್ರ ಅವನ ಬದುಕು ಸಾರ್ಥಕವಾಗುತ್ತದೆ ಎಂದು ಬೆಳ್ಳಾವಿ ಮಠದ ಕಾರದ ವೀರ ಬಸವೇಶ್ವರ ಸ್ವಾಮೀಜಿ ಹೇಳಿದರು. ಗುಬ್ಬಿ ಪಟ್ಟಣದಲ್ಲಿ ನಡೆದ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಕುಮಾರಸ್ವಾಮಿ ಅವರು ಮುಂಚಿನಿಂದಲೂ ಸಾಮಾಜಿಕವಾಗಿ ಧಾರ್ಮಿಕವಾಗಿ ಶೈಕ್ಷಣಿಕವಾಗಿ ಮತ್ತು ಹಲವು ರೀತಿಯ ಉಚಿತ ವೈದ್ಯಕೀಯ ತಪಾಸಣಾ ಶಿಬಿರಗಳನ್ನು ಮಾಡಿಕೊಂಡು ಬಂದಿದ್ದಾರೆ. ಲಯನ್ಸ್ ಕ್ಲಬ್…