ಸೆ.15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ 90 ಕಿ.ಮೀ. ಮಾನವ ಸರಪಳಿ
ತುಮಕೂರು : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 15ರಂದು ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕು ಹಿರೇಹಳ್ಳಿ ಗ್ರಾಮ ಪಂಚಾಯಿತಿ ನಂದಿಹಳ್ಳಿ ಗ್ರಾಮದವರೆಗೆ 90 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು ಪ್ರಜಾಪ್ರಭುತ್ವ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಬೇಕಾದರೆ ಪ್ರಜಾಪ್ರಭುತ್ವವಾದಿಗಳು ಈ ದಿನಾಚರಣೆಯಲ್ಲಿ ಪಾಲ್ಗೊಳ್ಳಬೇಕು. …