ಮಾದಕ ವಸ್ತುಗಳು ವಿದ್ಯಾರ್ಥಿಗಳಿಗೆ ಮಾರಕ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ
ತುಮಕೂರು: ಮನುಷ್ಯನ ಜೀವನ ಮತ್ತು ವ್ಯಕ್ತಿತ್ವವನ್ನು ಹಾಳು ಮಾಡುವ ಮಾದಕ ವಸ್ತುಗಳಿಂದ ದೂರವಿರಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಗರದ ಡಾ: ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಹಾಗೂ ಅಚರ್ಡ್ ಮದ್ಯವರ್ಜನ ಮತ್ತು ಸಮಗ್ರ ಪುನರ್ವಸತಿ ಕೇಂದ್ರದ ಸಹಯೋಗದಲ್ಲಿ…