ಶಾಸಕರಿಗೆ ಮನವಿ ಸಲ್ಲಿಸಿದ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು
ತುರುವೇಕೆರೆ: ಸರ್ಕಾರಿ ನೌಕರರ ಬೇಡಿಕೆಗಳಾದ ಹಳೇ ಪಿಂಚಣಿ ಜಾರಿ, 7ನೇ ವೇತನ ಆಯೋಗದ ವರದಿಯ ಅನುಷ್ಠಾನ, ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡುವ ಬಗ್ಗೆ ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸಿ ಕೂಡಲೇ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ ತಾಲ್ಲೂಕು ಕಛೇರಿಯಲ್ಲಿ ಭೇಟಿಯಾಗಿ ಬೇಡಿಕೆ ಈಡೇರಿಕೆಗೆ ಮನವಿ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ತುರುವೇಕೆರೆ ತಾಲೂಕು ಘಟಕದ ಪದಾಧಿಕಾರಿಗಳನ್ನು ಕುರಿತು ಮಾತನಾಡಿದ ಅವರು, ಮಾರುಕಟ್ಟೆಯಲ್ಲಿ ಕೇಂದ್ರ…