ಶುಕ್ರವಾರ ರಾತ್ರಿ ಸುರಿದ ಮಳೆಯಿಂದಾಗಿ ತಾಲೂಕಿನ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಗುಬ್ಬಿ: ತಾಲೂಕಿನಲ್ಲಿ ಶುಕ್ರವಾರ ರಾತ್ರಿ ಗುಡುಗು ,ಮಿಂಚು ,ಗಾಳಿಯಿಂದ ಕೂಡಿದ ಹದವಾದ ಮಳೆ ಬಿದ್ದಿರುವುದು ರೈತರಲ್ಲಿ ಹರ್ಷವನ್ನು ಉಂಟುಮಾಡಿದೆ. ಮುಂಗಾರು ಪ್ರಾರಂಭವಾಗಿ ಹಲವಾರು ತಿಂಗಳುಗಳಿಂದ ಮಳೆಇಲ್ಲದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ತಾಲೂಕಿನಲ್ಲಿ ಬರದ ತೀವ್ರತೆ ಹೆಚ್ಚಾಗಿದ್ದು ರೈತರು ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.ಪ್ರಾಣಿ ಪಕ್ಷಿಗಳ ಕುಡಿಯುವ ನೀರಿಗೂ ಕಷ್ಟ ಎದುರಾಗಿತ್ತು. ಭರಣಿ ಮಳೆಯ ಕೊನೆಯ ದಿನವಾದ ಶುಕ್ರವಾರ ರಾತ್ರಿ ಸುರಿದ ಮಳೆಯಿಂದಾಗಿ ತಾಲೂಕಿನ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ರಾತ್ರಿ ಬೀಸಿದ ಮಳೆ ಗಾಳಿಯಿಂದಾಗಿ…