ಮಾನವ ಸರಪಳಿ ಕಾರ್ಯಕ್ರಮ ಅಭೂತಪೂರ್ವ ಯಶಸ್ವಿ – ಜಿ. ಪರಮೇಶ್ವರ
ತುಮಕೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಪ್ರಜಾ ಪ್ರಭುತ್ವ ಮತ್ತು ಸಂವಿಧಾನದ ಪ್ರಾಮುಖ್ಯತೆಯನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಇಂದು ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕು ಹಿರೇಹಳ್ಳಿ ಗ್ರಾಮ ಪಂಚಾಯಿತಿ ನಂದಿಹಳ್ಳಿ ಗ್ರಾಮದವರೆಗೆ ನಿರ್ಮಿಸಲಾಗಿದ್ದ 90 ಕಿ.ಮೀ. ಉದ್ದದ ಮಾನವ ಸರಪಳಿಯು ಅಭೂತಪೂರ್ವ ಯಶಸ್ಸನ್ನು ಕಂಡಿದೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ. ಪರಮೇಶ್ವರ ತಿಳಿಸಿದರು. ನಗರದ ಪರಿವೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…