ನಗರದಲ್ಲಿ ಇಂದಿನಿಂದ ಮೈಸೂರು ಸ್ಯಾಂಡಲ್ ಸಾಬೂನು ಮೇಳ : ಕೆ. ಎಸ್. ಗಂಗಪ್ಪ
ತುಮಕೂರು: ಬೆಂಗಳೂರಿನ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ವತಿಯಿಂದ ಅಕ್ಟೋಬರ್ 22 ರಿಂದ 31ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೆ ನಗರದ ಚಿಲುಮೆ ಪೋಲೀಸ್ ಸಮುದಾಯ ಭವನದಲ್ಲಿ ಮೈಸೂರು ಸ್ಯಾಂಡಲ್ ಸಾಬೂನು ಮೇಳವನ್ನು ಆಯೋಜಿಸಲಾಗಿದೆ ಎಂದು ಮಾರುಕಟ್ಟೆ ಪ್ರಧಾನ ವ್ಯವಸ್ಥಾಪಕ ಕೆ.ಎಸ್. ಗಂಗಪ್ಪ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿಂದು ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಸ್ಯಾಂಡಲ್ ಸಾಬೂನು ವಿಶ್ವ ವಿಖ್ಯಾತಿ ಪಡೆದಿದ್ದು, ನಮ್ಮ ಸಂಸ್ಥೆಯು ಕೇಂದ್ರ ಸರ್ಕಾರದಿಂದ…