ಸೈಂಟ್ ಥಾಮಸ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಗುಬ್ಬಿ: ನವಂಬರ್ ಮೊದಲ ದಿನ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆ ಮಾಡದೆ ವರ್ಷಪೂರ್ತಿ ಆಚರಿಸುವ ಮೂಲಕ ಕನ್ನಡ ಭಾಷೆಯ ಹಿರಿಮೆಯನ್ನು ಹೆಚ್ಚಿಸುವಂತೆ ತಹಶೀಲ್ದಾರ್ ಆರತಿ ಬಿ. ಕರೆ ನೀಡಿದರು. ತಾಲೂಕಿನ ಸಿ ಎಸ್ ಪುರ ಗ್ರಾಮದ ಸೈಂಟ್ ಥಾಮಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕನ್ನಡ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರಾಷ್ಟ್ರದಲ್ಲಿ ಅತಿ ಹೆಚ್ಚು ಜ್ಞಾನ ಪೀಠ ಪ್ರಶಸ್ತಿ ದೊರಕಿರುವುದು ಕನ್ನಡ ಭಾಷೆಗೆ ಎಷ್ಟು ಗೌರವವಿದೆ ಎಂಬುದನ್ನು ತಿಳಿಯಬಹುದು. ರಾಷ್ಟ್ರದಲ್ಲಿ ಕನ್ನಡ ಭಾಷೆಗೆ ಇರುವ ಪ್ರಾಶಸ್ತ್ಯ…