ವೈಭವಯುತ ತುಮಕೂರು ದಸರಾಕ್ಕೆ ಚಾಲನೆ : ಜಿಲ್ಲಾಧಿಕಾರಿ ಶುಭ ಕಲ್ಯಾಣ್
ತುಮಕೂರು : ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿರುವ ವೈಭವಯುತ ತುಮಕೂರು ದಸರಾ ಉತ್ಸವವು ಗುರುವಾರದಿಂದ ಪ್ರಾರಂಭಗೊಂಡಿದ್ದು, ಅಕ್ಟೋಬರ್ 12ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಸಂಸ್ಕøತಿ ಹಾಗೂ ಧಾರ್ಮಿಕ ಆಚರಣೆಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ತುಮಕೂರು ದಸರಾ ಉತ್ಸವವನ್ನು ಆಚರಿಸಲಾಗುತ್ತಿದೆ. ಇಂದು ಬೆಳಿಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಶ್ರೀ…