ಜಿಲ್ಲಾಧಿಕಾರಿಗಳಿಂದ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ
ತುಮಕೂರು: ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ವತಿಯಿಂದ ಅಂದಾಜು 107ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡು ಅಂತಿಮ ಹಂತದಲ್ಲಿರುವ 30 ಎಂಎಲ್‍ಡಿ ತೃತೀಯ ಹಂತದ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಇಂದು ಪರಿಶೀಲಿಸಿದರು. ಸ್ಥಳದಲ್ಲಿದ್ದ ಕೆಐಎಡಿಬಿ ಕಾರ್ಯನಿರ್ವಾಹಕ ಇಂಜಿನಿಯರ್ ಲಕ್ಷ್ಮೀಶ್ ಮಾತನಾಡಿ, ತ್ಯಾಜ್ಯ ನೀರನ್ನು 2ನೇ ಹಂತದಲ್ಲಿ ಶುದ್ಧೀಕರಣಗೊಳಿಸಿ ಭೀಮಸಂದ್ರ ಕೆರೆಗೆ ಬಿಟ್ಟಿದ್ದು, ಸದರಿ ನೀರನ್ನು ವಸಂತ ನರಸಾಪುರ ಪ್ರದೇಶದಲ್ಲಿರುವ ತ್ಯಾಜ್ಯ…