ಮೈಸೂರು. ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಆಹ್ವಾನ ನೀಡಿದರು.
ಕೆ.ಆರ್. ನಗರ ವಿಧಾನ ಸಭಾ ಶಾಸಕ ಡಿ.ರವಿಶಂಕರ್, ಎಚ್.ಡಿ ಕೋಟೆ ಶಾಸಕರಾದ ಅನಿಲ್ ಕುಮಾರ್, ವಿಧಾನ ಪರಿಷತ್ ಶಾಸಕ ಡಾ ಯತೀಂದ್ರ ಎಸ್, ಸಿ.ಎನ್.ಮಂಜೇಗೌಡ, ಡಾ ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಮತ್ತಿತರರೊಂದಿಗೆ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾಕ್ಕೆ ತೆರಳಿದ ಅವರು, ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಂತೆ ಆಮಂತ್ರಿಸಿದರು.