
ಬೆಂಗಳೂರು: ಕರ್ನಾಟಕ ಆರ್ಟ್ಸ್ ಫೌಂಡೇಶನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರ ನಗರ ಜಿಲ್ಲೆ ಇವರ ಸಹಕಾರದೊಂದಿಗೆ ಚಿತ್ರಕಲಾವಿದ, ಸಮಾಜ ಸೇವಕ, ಬಹುಮುಖ್ಯ ಪ್ರತಿಭೆ ಹಾಗೂ ಕರ್ನಾಟಕ ಲಲಿತ ಕಲಾ ಅಕಾಡೆಮಿ ನಿಕಟಪೂರ್ವ ಸದಸ್ಯ ಆತ್ಮಾನಂದ ಅವರ ಚಿತ್ರಕಲಾ ಪ್ರದರ್ಶನವನ್ನು ನಾಳೆ ಬೆಳಗ್ಗೆ 11 ಗಂಟೆಗೆ (ಗುರುವಾರ ರಿಂದ ಶುಕ್ರವಾರ) ಎರಡು ದಿನಗಳ ವರೆಗೆ ನಗರದ ವರ್ಣ ಆರ್ಟ್ ಗ್ಯಾಲರಿ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಆರ್ಟ್ಸ್ ಫೌಂಡೇಶನ್ ಅಧ್ಯಕ್ಷೆ ಶ್ರೀಮತಿ ಸರೋಜಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿತ್ರಕಲಾ ಪ್ರದರ್ಶನವನ್ನು ಕನ್ನಡ ಚಿತ್ರರಂಗದ ಖ್ಯಾತ ಚಲನಚಿತ್ರ ನಟ ಸುಚೇಂದ್ರ ಪ್ರಸಾದ್ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ತಿನ ಸದಸ್ಯ ಕೇಶವ್ ಪ್ರಸಾದ್, ಕರ್ನಾಟಕ ಲಲಿತ ಕಲಾ ಅಕಾಡೆಮಿಯ ಅಧ್ಯಕ್ಷ ಪ.ಸ. ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ನಗರ ಜಿಲ್ಲೆಯ ಸಹಾಯಕ ನಿರ್ದೇಶಕ ಆರ್. ಚಂದ್ರಶೇಖರ್, ಕರ್ನಾಟಕ ಆರ್ಟ್ಸ್ ಫೌಂಡೇಶನ್ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.