ಜನಪದ ಸಂಸ್ಕಾರದಿಂದ ಮಾತ್ರ ಸಂಸ್ಕೃತಿ ಉಳಿಯಲಿದೆ: ಕುಲಪತಿ ಪ್ರೊ. ಬಿ.ಕೆ. ರವಿ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಶಿಕ್ಷಣ ವಿಭಾಗದಿಂದ ಆಯೋಜಿಸಿದ್ದ ಸುಗ್ಗಿ ಸಂಭ್ರಮ ಕಾರ್ಯಕ್ರಮಕ್ಕೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಕೋಲಾರ) ಕುಲಪತಿಗಳಾದ ಪ್ರೊ. ಡಾ. ಬಿ.ಕೆ. ರವಿ ಅವರು ಚಾಲನೆ ನೀಡಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸ್ನಾತಕೋತ್ತರ ವಿದ್ಯಾಭ್ಯಾಸ ಕೈಗೊಳ್ಳುತ್ತಿರುವ ಹಲವಾರು ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದು ನಮ್ಮ ನೆಲ, ಜಲದ ಸೊಗಡನ್ನು ಸಾರುವ ಈ ರೀತಿಯ ಕಾರ್ಯಕ್ರಮಗಳ ಆಯೋಜನೆ ಶ್ಲಾಘನೀಯ ಎಂದರು.

 

ಪ್ರಸ್ತುತ ರಾಷ್ಟ್ರ ಉಳಿಯಬೇಕು ಹಾಗೂ ಭವಿಷ್ಯದ ಉತ್ತಮ ರಾಷ್ಟ್ರ ನಿರ್ಮಾಣ ಶಿಕ್ಷಕರಿಂದ ಮಾತ್ರ ಸಾಧ್ಯ. ಪ್ರತಿಯೊಬ್ಬರೂ ಕೂಡ ತಮ್ಮ ಜೀವನದಲ್ಲಿ ಶ್ರದ್ಧೆ, ಭಕ್ತಿ, ಗುರು ತೋರಿದ ಮಾರ್ಗದ ಮೂಲಕ ಪ್ರತಿಭೆಯಿಂದ ಮಾತ್ರ ಮುಂದೆ ಬರಲು ಸಾಧ್ಯ, ಹಾಗೂ ಯಶಸ್ಸು ಶತಸಿದ್ಧ. ಶಿಕ್ಷಣ ವಿಭಾಗಕ್ಕೆ ಹೆಚ್ಚಿನ ಜವಾಬ್ದಾರಿ ಇದೆ, ಭಾವಿ ಶಿಕ್ಷಕರನ್ನು ರೂಪುಗೊಳಿಸುವಲ್ಲಿ ನಮ್ಮ ಶಿಕ್ಷಣ ವಿಭಾಗವು ಮಹತ್ತರ ಪಾತ್ರವನ್ನು ವಹಿಸುತ್ತಿದೆ. ಪ್ರಸ್ತುತ ತಂತ್ರಜ್ಞಾನ ಯುಗದಲ್ಲಿ ಶಿಕ್ಷಕರು ತಮ್ಮನ್ನು ಸ್ಪರ್ಧಾತ್ಮಕ ಜಗತ್ತಿಗೆ ಅಣಿಗೊಳಿಸುವುದು ಅನಿವಾರ್ಯ.ಅತೀಯಾದರೆ ಅಮೃತವೂ ವಿ ಶುರುವಾಗುತ್ತದೆ ಎಂಬುದರ ಅರಿವಿರಬೇಕು ಎಂದರು.

 

ಕೊನೆಯಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಾಣಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

 

ಇದೇ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಕೆ.ರವಿ, ಬೆಂವಿವಿಯ ಕಲಾ ನಿಕಾಯದ ಡೀನ್, ಹಿರಿಯ ಪ್ರಾಧ್ಯಾಪಕ ಪ್ರೊ. ಸಿ.‌ ಸೋಮಶೇಖರ್, ಶಿಕ್ಷಣ ನಿಕಾಯದ ಡೀನ್ ಪ್ರೊ. ಕೃಷ್ಣಸ್ವಾಮಿ ಪಿ.ಸಿ, ಶಿಕ್ಷಣ ವಿಭಾಗದ ಸಂಯೋಜಕರಾದ ಡಾ. ವಾಣಿಶ್ರೀ ಕೊಪ್ಪದ, ಡಾ. ಎಂ.ಸಿ. ಎರ್ರಿಸ್ವಾಮಿ, ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ನಾಗರತ್ನಮ್ಮ, ಅರ್ಥಶಾಸ್ತ್ರ ವಿಭಾಗದ ಪ್ರೊ. ಪಾರ್ವತಮ್ಮ, ಸಮಾಜ ಶಾಸ್ತ್ರ ವಿಭಾಗದ ಪ್ರೊ. ಸುಧಾ ಕೋಟೆ, ತೆಲುಗು ವಿಭಾಗದ ಡಾ. ಡಿ.ಕೆ.‌ಪ್ರಭಾಕರ್ ಶಿಕ್ಷಣ ವಿಭಾಗದ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿಗಳು, ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಾಣಾರ್ಥಿಗಳು ಮತ್ತಿತರರು ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

 

 

Leave a Reply

Your email address will not be published. Required fields are marked *

error: Content is protected !!