
ಪ್ರಮುಖ ಸುದ್ದಿಗಳು
76ನೇ ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್ ಅವರಿಗೆ ಅವಮಾನ: ಬಾಬಾ ಸಾಹೇಬ್ ಅವರ ಭಾವಚಿತ್ರ ಇಡದೆ ದಿನಾಚರಣೆ
ತುಮಕೂರು: ಸಂವಿಧಾನ ಶಿಲ್ಪಿ ಭಾರತ ರತ್ನ ಡಾಬಿ ಆರ್ ಅಂಬೇಡ್ಕರ್ ಅವರು ಭಾರತ ಸೇರಿದಂತೆ ಇತರೆ ರಾಷ್ಟ್ರಗಳಿಗೆ ನೀಡಿದ ಸಂವಿಧಾನ ಮಾದರಿಯಾಗಿದ್ದು ದೇಶ ವಿದೇಶಗಳಲ್ಲಿ ಅಂಬೇಡ್ಕರ್ ಅವರನ್ನು ಪ್ರಜಾಪ್ರಭುತ್ವದ ಜ್ಞಾನಿಯೆಂದು ಪೂಜಿಸುತ್ತಿದ್ದಾರೆ ಇಂತಹದರ ನಡುವೆ ಭಾರತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ವಿಶೇಷ ಸ್ಥಾನಮಾನಗಳಿದ್ದು ಎಲ್ಲಾ ರಾಜ್ಯ ಸರ್ಕಾರಗಳು ರಾಷ್ಟ್ರೀಯ ದಿನಾಚರಣೆಗಳ ಸಮಯ ಸಂದರ್ಭದಲ್ಲಿ ಕಡ್ಡಾಯವಾಗಿ ಅಂಬೇಡ್ಕರ್ ಅವರ ಫೋಟೋಗಳನ್ನು ಇಟ್ಟು ಪೂಜಿಸಬೇಕು ಎಂಬ ಆದೇಶವಿದ್ದರೂ ಕೂಡಾ ಇದನ್ನ ಧಿಕ್ಕರಿಸಿ ಅಂಬೇಡ್ಕರ್ ಅವರ ಭಾವಚಿತ್ರ ಇರದೆ 76ನೇ…
ಬೆಂಗಳೂರು ವಿವಿ: ಹಿರಿಯ ಪ್ರಾಧ್ಯಾಪಕ, ಕೊಪ್ಪಳ ವಿವಿ ಕುಲಪತಿ ಪ್ರೊ. ಬಿ.ಕೆ ರವಿ ರವರ ಬೀಳ್ಕೊಡುಗೆ ಸಮಾರಂಭ
ಬೆಂಗಳೂರು, ಜನವರಿ 30: ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಹಿರಿಯ ಪ್ರಾಧ್ಯಾಪಕರು, ಪ್ರಸ್ತುತ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಸೇವೆ ಸಲ್ಲಿಸುತ್ತಿರುವ ಪ್ರೊ. ಬಿ.ಕೆ.ರವಿ ರವರು 2025ರ ಜನವರಿ 31ರಂದು ವಯೋ ನಿವೃತ್ತಿ ಹೊಂದುತ್ತಿರುವ ಅಂಗವಾಗಿ ವಿದ್ಯಾರ್ಥಿಗಳ ನೆಚ್ಚಿನ ರವಿ ಮೇಷ್ಟ್ರುಗೆ ಬೆಂಗಳೂರು ವಿವಿಯ ಸಂವಹನ ವಿಭಾಗದ ಅಧ್ಯಾಪಕರ ವೃಂದ, ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳಿಂದ (ಜನವರಿ 31ರಂದು ಬೆಳಗ್ಗೆ 11.00 ಗಂಟೆಗೆ) ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಪ್ರೊ. ವೆಂಕಟಗಿರಿಗೌಡ ಮೆಮೋರಿಯಲ್ ಆಡಿಟೋರಿಯಂನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು…
ಸ್ಥಳೀಯ ಸಂಸ್ಥೆಗಳಿಗೆ ಕಾಲ-ಕಾಲಕ್ಕೆ ಚುನಾವಣೆ ನಡೆದರೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಆಯೋಗದ ಅಧ್ಯಕ್ಷ ಡಾ: ಸಿ. ನಾರಾಯಣಸ್ವಾಮಿ
ತುಮಕೂರು: ಸ್ಥಳೀಯ ಸಂಸ್ಥೆಗಳಿಗೆ ಕಾಲ-ಕಾಲಕ್ಕೆ ಚುನಾವಣೆಗಳು ನಡೆದಾಗ ಮಾತ್ರ ಹಣಕಾಸು ಆಯೋಗವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡಲಿದೆ ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ: ಸಿ. ನಾರಾಯಣಸ್ವಾಮಿ ತಿಳಿಸಿದರು. ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ 5ನೇ ರಾಜ್ಯ ಹಣಕಾಸು ಆಯೋಗದ ವಿಷಯಗಳ ಕುರಿತು ಜಿಲ್ಲಾ ಪಂಚಾಯತಿಯಲ್ಲಿ ಬುಧವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೇಂದ್ರ ಹಣಕಾಸು ಆಯೋಗವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡುವ ಸಂದರ್ಭದಲ್ಲಿ…
ಸಮಾಜದಲ್ಲಿಂದು ಸೈಬರ್ ಸುರಕ್ಷತೆ ಪ್ರಮುಖ ಪಾತ್ರ ವಹಿಸುತ್ತಿದೆ : ಡಾ.ವಿವೇಕ ವೀರಯ್ಯ
ತುಮಕೂರು: ಇಂದಿನ ಪರಸ್ಪರ ಸಂಪರ್ಕಿತ ಡಿಜಿಟಲ್ ಪರಿಸರದಲ್ಲಿ ವಿವಿಧ ಕ್ಷೇತ್ರಗಳ ಮಾಹಿತಿಯನ್ನು ರಕ್ಷಿಸಲು ಸೈಬರ್ ಸುರಕ್ಷತೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಸಾಹೇ ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ ವೀರಯ್ಯ ಅವರು ಅಭಿಪ್ರಾಯಪಟ್ಟರು. ನಗರದ ಕ್ಯಾತಸಂದ್ರದ ಬಳಿಯಿರುವ ಶ್ರೀ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿಂಗ್ ನಲ್ಲಿ ಏರ್ಪಡಿಸಲಾಗಿದ್ದ ಒಂದು ವಾರದ ಪ್ರಾಧ್ಯಾಪಕರ ಪ್ರಗತಿ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ‘ಇ-ಆಡಳಿತದ ಸುರಕ್ಷತೆ, ಸೈಬರ್ ಭದ್ರತೆ ಸಮ್ಮೀಲನದ ವಸ್ತುಸ್ಥಿತಿ ಹಾಗೂ ಆಧುನಿಕ ಕಾಲಘಟ್ಟದ ತಂತ್ರಜ್ಞಾನದಲ್ಲಿ ಕೃತಕ ಬುದ್ದಿಮತ್ತೆ’ ವಿಷಯ ಕುರಿತ ಉಪನ್ಯಾಸ…
ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಅಮಾನಿಕೆರೆಯಲ್ಲಿ 25 ಕೋಟಿ ರೂ. ವೆಚ್ಚದ ಗಾಜಿನ ಸೇತುವೆ ನಿರ್ಮಾಣ- ಡಾ, ಜಿ, ಪರಮೇಶ್ವರ
ತುಮಕೂರು: ಪ್ರವಾಸೋದ್ಯಮ ಅಭಿವೃದ್ಧಿಗಾಗಿ ನಗರದ ಅಮಾನಿಕೆರೆಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಗ್ಲಾಸ್ ಬ್ರಿಡ್ಜ್(ಗಾಜಿನ ಸೇತುವೆ) ನಿರ್ಮಾಣಕ್ಕೆ ನೀಲ ನಕ್ಷೆಯನ್ನು ಸಿದ್ಧಪಡಿಸಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು 200 ಕೋಟಿ ರೂ.ಗಳ ಅನುದಾನಕ್ಕೆ ಸರ್ಕಾರ…
ಸಚಿವರಿಂದ ನಿರುದ್ಯೋಗಿ ಯುವಕರಿಗೆ ನೇಮಕಾತಿ ಆದೇಶ ವಿತರಣೆ
ತುಮಕೂರು: ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ ಅವರು ಉದ್ಯೋಗ ಮೇಳದಲ್ಲಿ ಆಯ್ಕೆಯಾದ 150ಕ್ಕೂ ಹೆಚ್ಚು ನಿರುದ್ಯೋಗಿ ಯುವಕರಿಗೆ ಸಾಂಕೇತಿಕವಾಗಿ ನೇಮಕಾತಿ ಆದೇಶ ವಿತರಣೆ ಮಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ವತಿಯಿಂದ 76ನೇ ಗಣರಾಜ್ಯೋತ್ಸವದ ಅಂಗವಾಗಿ ನಗರದ ಎಂಪ್ರೆಸ್ ಬಾಲಕಿಯರ ಕಾಲೇಜಿನಲ್ಲಿ ಭಾನುವಾರ ಜರುಗಿದ ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಭೂ ಮಂಜೂರಾತಿ ಪೋಡಿ ದುರಸ್ತಿ ದಾಖಲೆ ಮತ್ತು ಪಹಣಿ ವಿತರಣೆ, ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ…
ಗಣರಾಜೋತ್ಸವ ಹಾಗೂ ಸಂವಿಧಾನ ಸಮರ್ಪಣಾ ದಿನಕ್ಕೆ ಕಲಾಶ್ರೀ ಡಾ.ಲಕ್ಷ್ಮಣ್ ದಾಸ್ ರವರಿಂದ ಕಾರ್ಯಕ್ರಮಕ್ಕೆ ಚಾಲನೆ
ತುಮಕೂರು.ನಗರದ ಟೌನ್ಹಾಲ್ ಮುಂಭಾಗದಲ್ಲಿ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ವತಿಯಿಂದ ಗಣರಾಜೋತ್ಸವ ಹಾಗೂ ಸಂವಿಧಾನ ಸಮರ್ಪಣಾ ದಿನವನ್ನು ಸಮಿತಿಗಳ ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿಕುಮಾರ್ ನೇತೃತ್ವದಲ್ಲಿ ಆಚರಿಸಲಾಯಿತು. ಬಾಬಾ ಸಾಹೇಬರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಲಾಶ್ರೀ ಡಾ.ಲಕ್ಷ್ಮಣ್ ದಾಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಅವರು,ಇಂದು ೭೬ ನೇ ಗಣರಾಜೋತ್ಸವವನ್ನು ಆಚರಿಸುತಿದ್ದೇವೆ. ಇದಕ್ಕೆ ಮೂಲ ಕಾರಣಕರ್ತರು ನಮ್ಮ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್.ಅವರು ಪ್ರತಿಪಾದಿಸಿದ ತತ್ವ ಸಿದ್ದಾಂತಗಳನ್ನು…
ದಲಿತ ಮುಖಂಡರಿಂದ ಶಾಸಕ ಎಸ್, ಆರ್, ಶ್ರೀನಿವಾಸ್ ರವರಿಗೆ ಅಭಿನಂದನೆ
ತುಮಕೂರು : ಇತ್ತಿಚಿನ ರಾಜಕೀಯ ಬೆಳವಣಿಗೆಯಲ್ಲಿ ದಲಿತ ಎಡಗೈ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಅವರು ಸಹ ಎಲ್ಲಾ ರಂಗದಲ್ಲಿ ಅಧಿಕಾರಕ್ಕೆ ಬರಬೇಕು ಯಾವುದೇ ರಾಜಕೀಯ ಪಕ್ಷಗಳು ಅವರನ್ನು ಗುರುತಿಸುವಂತಹ ಕೆಲಸ ವಾಗಬೇಕು ಎಂದು ಗುಬ್ಬಿ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಕೆ, ಎಸ್, ಆರ್, ಟಿ, ಸಿ ನಿಗಮದ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ರವರ ಹೇಳಿಕೆಯನ್ನು ಸ್ವಾಗತಿಸಿದ ಎಡಗೈ ಸಮುದಾಯದ ಮುಖಂಡರು ಇಂದು ಅವರಿಗೆ ಅಭಿನಂದನೆ ಸಲ್ಲಿಸಿದರು. ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕರಾದ…
ಸ್ಥಳ ಭೇಟಿ ಮೂಲಕ ಪ.ಜಾತಿ/ಪ.ಪಂಗಡ ಸಮುದಾಯಗಳ ಸಮಸ್ಯೆ ಪರಿಹರಿಸಿ :ಜಿಲ್ಲಾಧಿಕಾರಿ ಶುಭ ಕಲ್ಯಾಣ್
ತುಮಕೂರು: ಪ.ಜಾತಿ/ಪ.ಪಂಗಡ ಸಮುದಾಯಗಳ ಸಮಸ್ಯೆಗಳನ್ನು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ದೊರಕಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಪ.ಜಾತಿ ಮತ್ತು ಪ.ಪಂಗಡಗಳ ಕುಂದು ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ.ಜಾತಿ ಮತ್ತು ಪ.ಪಂಗಡಗಳ ಸ್ಮಶಾನ ಭೂಮಿ ಅಭಿವೃದ್ಧಿ, ನಿವೇಶನ ಹಂಚಿಕೆ, ಸಾಗುವಳಿ ಚೀಟಿ, ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಕುಂದು…
ಎಲೆರಾಂಪುರ ಗ್ರಾಪಂ ಅಧ್ಯಕ್ಷರಾಗಿ ಗೀತಾ ನರಸಿಂಹರಾಜು ಚುನಾವಣೆಯಲ್ಲಿ ಆಯ್ಕೆ
ಕೊರಟಗೆರೆ :ತಾಲೂಕಿನ ಕೋಳಾಲ ಹೋಬಳಿಯ ಎಲೆರಾಂಪುರ ಗ್ರಾಪಂಯ ಅಧ್ಯಕ್ಷರ ಚುನಾವಣೆಯಲ್ಲಿ. ಗೀತಾ ನರಸಿಂಹರಾಜು ಆಯ್ಕೆಯಾಗಿದ್ದಾರೆ. ಎಂದು ಚುನಾವಣಾಧಿಕಾರಿಯಾದ ತಹಸೀಲ್ದಾರ್ ಕೆ.ಮಂಜುನಾಥ್ ಘೋಷಣೆ ಮಾಡಿದರು. ಎಲೆರಾಂಪುರ ಗ್ರಾಪಂಯಲ್ಲಿ ಒಟ್ಟು 18 ಜನ ಸದಸ್ಯರ ಸಂಖ್ಯಾಬಲ ಹೊಂದಿದ್ದು ಈ ಹಿಂದೆ ಅಧ್ಯಕ್ಷರಾಗಿದ್ದ ಎಚ್ಎಸ್ ಚಂದ್ರಶೇಖರ್ ಅವರ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗೀತಾ ನರಸಿಂಹರಾಜು ಹಾಗೂ ಡಿ. ನಾಗೇನಹಳ್ಳಿಯ ಚಂದ್ರಯ್ಯ ಇಬ್ಬರು ನಾಮಪತ್ರ ಸಲ್ಲಿಸಿದ ಕಾರಣ ಗೀತಾ ರವರಿಗೆ 10 ಮತಗಳು ಹಾಗೂ ಚಂದ್ರಯ್ಯನವರಿಗೆ 8 ಮತಗಳು ಚಲಾವಣೆ ಆದವು ಚುನಾವಣೆಯಲ್ಲಿ…