ಡಿಸೆಂಬರ್ 14ರಂದು ಸಾಹೇ(ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ :
876 ವಿದ್ಯಾರ್ಥಿಗಳಿಗೆ ಪದವಿ: 10 ಮಂದಿಗೆ ಚಿನ್ನದ ಪದಕ * ವೈದ್ಯಕೀಯ-01 * ದಂತ ವೈದ್ಯಕೀಯ- 02 *ಎಂಜಿನಿಯರಿಂಗ್-06 *ಎಂಸಿಎ-01 ಸೇರಿದಂತೆ 10ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ. ತುಮಕೂರು: ನಗರದ ಅಗಲಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ (ಡಿಸೆಂಬರ್ 14ರಂದು) ಬೆಳಿಗ್ಗೆ 10-30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ ಆಯೋಜಿಸಲಾಗಿದೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು….