ಆರು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ/ ಶೀಘ್ರ ಬಿಜೆಪಿ, ಜೆಡಿಎಸ್ ಸರ್ಕಾರ ಅಧಿಕಾರಕ್ಕೆ: ಮಸಾಲಾ ಜಯರಾಮ್ ಭವಿಷ್ಯ
ತುರುವೇಕೆರೆ: ಮುಂದಿನ ಆರು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದ್ದು, ಬಿಜೆಪಿ ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೇರಲಿದೆ ಎಂದು ಮಾಜಿ ಶಾಸಕ ಮಸಾಲಾ ಜಯರಾಮ್ ಭವಿಷ್ಯ ನುಡಿದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳು ನಡೆಸಿದ ರಸ್ತೆ ತಡೆ, ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬರುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದ ಕಾಂಗ್ರೆಸ್ ಪಕ್ಷ, ಅಧಿಕಾರಕ್ಕೆ ಬಂದ ಮೇಲೆ…