ಚಿನ್ನೇನಹಳ್ಳಿ ವಾಂತಿ-ಭೇದಿ ಪ್ರಕರಣ ರೋಗಿಗಳು ಗುಣಮುಖರಾಗುವವರೆಗೆ ಚಿಕಿತ್ಸೆ ನೀಡಲು ಗೃಹ ಸಚಿವರ ಸೂಚನೆ
ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕು ಮಿಡಿಗೇಶಿ ಹೋಬಳಿ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ ಅಸ್ವಸ್ಥರಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ರೋಗಿಗಳು ಸಂಪೂರ್ಣವಾಗಿ ಗುಣಮುಖರಾಗುವವರೆಗೆ ಉತ್ತಮ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಿನ್ನೇನಹಳ್ಳಿ ಗ್ರಾಮದ ಜನರು ಕಲುಷಿತ ನೀರು ಕುಡಿದು ವಾಂತಿ-ಭೇದಿಯಿಂದ ಅಸ್ವಸ್ಥರಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಭೇಟಿ ಮಾಡಿ ಅವರ ಆರೋಗ್ಯ ಸ್ಥಿತಿಯನ್ನು ವಿಚಾರಿಸಿ ಧೈರ್ಯ…