ಜಿಲ್ಲೆಯಲ್ಲಿ 136 ಡೆಂಗ್ಯೂ ಪ್ರಕರಣ : ನಿಯಮಿತವಾಗಿ ಹೊರಾಂಗಣ ಧೂಮೀಕರಣಕ್ಕೆ ಖಡಕ್ ಸೂಚನೆ
ತುಮಕೂರು: ಆರೋಗ್ಯ ಇಲಾಖೆ ವರದಿಯನುಸಾರ ಜಿಲ್ಲೆಯಲ್ಲಿ 2024ರ ಜನವರಿ ಮಾಹೆಯಿಂದ ಈವರೆಗೂ 136 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ನಿಯಮಿತವಾಗಿ ಹೊರಾಂಗಣ ಧೂಮೀಕರಣ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ವಿವಿಧ ಸಭೆಗಳನ್ನು ನಡೆಸಿ ಮಾತನಾಡಿದ ಅವರು,ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯಾ, ಮೆದುಳುಜ್ವರ ಹಾಗೂ ಆನೆಕಾಲು ರೋಗಗಳನ್ನು ನಿಯಂತ್ರಿಸಲು ಚರಂಡಿ ಸ್ವಚ್ಛತೆ, ನೀರು ನಿಲ್ಲದಂತೆ…