ಕರೀಕೆರೆ ಗ್ರಾಮದ,ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೆಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮ.

ತಿಪಟೂರು ಸುದ್ದಿ   ತಿಪಟೂರು ತಾಲೂಕಿನ  ನೊಣವಿನಕೆರೆ ಹೋಬಳಿಯ ನಲ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರೀಕೆರೆ ಗ್ರಾಮದ,ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತೆಂಗಿನ ಸಸಿ ನೆಡುವ  ಮೂಲಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಆಯೋಜನೆ ಮಾಡಲಾಗಿದ್ದು ವಿಶೇಷವಾಗಿತ್ತು.   ಕಾರ್ಯಕ್ರಮದಲ್ಲಿ 13 ಶಾಲೆಗಳಿಂದ ,150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ಸ್ಪರ್ಧಿಸಿದ್ದರು.     ಕಾರ್ಯಕ್ರಮದಲ್ಲಿ  ಜ್ಯೋತಿಯನ್ನು ಬೆಳಗಿಸಿ ಮಾತನಾಡಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ರವರು ಮಕ್ಕಳಿಗೆ ವಿದ್ಯಾಭ್ಯಾಸವು ಅಷ್ಟೇ ಮುಖ್ಯವಲ್ಲ,…

Read More

ಗೋಸಲ ಚನ್ನಬಸವೇಶ್ವರ ಸ್ವಾಮಿ ಯವರ ನೂತನ ಮರದ ರಥಕ್ಕೆ ಬೆಳ್ಳಿ ಕವಚ ಹೊದಿಸುವ ಕಾರ್ಯ ಶಾಸ್ತ್ರೋಕ್ತವಾಗಿನೆಡೆಯಿತು.

ಗುಬ್ಬಿ ಪಟ್ಟಣದ ಇತಿಹಾಸ ಪ್ರಸಿದ್ಧ ಗೋಸಲ ಚನ್ನಬಸವೇಶ್ವರ ಸ್ವಾಮಿ ಯವರ ಉತ್ಸವಕ್ಕೆಂದು ನೂತವಾಗಿ ನಿರ್ಮಾಣ ವಾಗಿರುವ ಮರದ ರಥಕ್ಕೆ ಬೆಳ್ಳಿ ಕವಚ ಹೊದಿಸುವ ಕಾರ್ಯ ಸೋಮವಾರ ಮಧ್ಯಾಹ್ನ 1-30 ಕ್ಕೆ ಶಾಸ್ತ್ರೋಕ್ತ ವಿದಿ ವಿಧಾನಗಳೊಂದಿಗೆ ದೇವಾಲಯದ ಆವರಣದಲ್ಲಿ ಜರುಗಿತು.     ಈ ಕಾರ್ಯಕ್ರಮವನ್ನು ಅರ್ಚಕರಾದ ಆರಾಧ್ಯ, ಹಾಗೂ ಆಗಮಿಕರಾದ ರುದ್ರಪ್ರಸಾದ್ ನೆಡೆಸಿಕೊಟ್ಟರು.ಬೆಳಿಗ್ಗೆಯಿಂದಲೇ ಮರದ ರಥ ದ ದಾನಿಗಳಾದ ಜೈ ಭಾರತ್ ಚಿತ್ರಮಂದಿರದ ಮಾಲೀಕರಾದ ಹರೀಶ್ ದಂಪತಿಗಳು ಪೂಜಾ ಕಾರ್ಯ ಕೈಗೊಂಡಿದ್ದರು ನಂತರ ಸಾಂಕೇತಿಕವಾಗಿ ಕವಚ ದಾರಣೆಯ…

Read More

ಶ್ರೀ ಸಂಕಷ್ಟಹರ ಗಣಪತಿ ವಕೀಲರ ಕಲಾ ಬಳಗದ ವಕೀಲ ಕಲಾವಿದರಿಂದ ನಾಟಕ ಪ್ರದರ್ಶನ

ಕಲ್ಪತರ ನಾಡು ಎಂದರೆ ತುಮಕೂರು ತುಮಕೂರಿಗೆ ಮತ್ತೊಂದು ಹೆಸರೇ ರಂಗಭೂಮಿಯ ತವರೂರು ಡಾಕ್ಟರ್ ಗುಬ್ಬಿ ವೀರಣ್ಣನವರು ಜನಿಸಿದ ಈ ನಾಡಲ್ಲಿ ಪೌರಾಣಿಕ ನಾಟಕವೆಂದರೆ ಕಲಾವಿದರಿಗೆ ಕಲಾ ಪ್ರೋತ್ಸಾಹಕರಿಗೆ ಬಹಳ ಅಚ್ಚುಮೆಚ್ಚು ಇಂತಹ ರಂಗಭೂಮಿಯ ಇತಿಹಾಸವುಳ್ಳ ತುಮಕೂರಿನಲ್ಲಿ ತುಮಕೂರು ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಸಂಕಷ್ಟಹರ ಗಣಪತಿ ವಕೀಲರ ಕಲಾ ಬಳಗದ ವಕೀಲ ಕಲಾವಿದರಿಂದ ತುಮಕೂರಿನ ಹೆಸರಾಂತ ಶ್ರೀ ಬಸವೇಶ್ವರ ಡ್ರಾಮಾ ಸೀನರಿಯ ಭವ್ಯರಂಗ ಸಜ್ಜಿಕೆಯಲ್ಲಿ ಕಲಾ ಹೊಂಗಿರಣ ಟಿ ಎಚ್ ಸುದೀಪ್ ರವರ…

Read More

ಅರ್ಹ ಪಲಾನುಭವಿಗಳಿಗೆ ಕೃಷಿ ಪರಿಕರಗಳನ್ನು ವಿತರಿಸಿದ ಶಾಸಕ ಎಸ್ ಆರ್ ಶ್ರೀನಿವಾಸ್

ಗುಬ್ಬಿ ಸುದ್ದಿ ಇಂದು ಗುಬ್ಬಿ  ಪಟ್ಟಣದ ಶಾಸಕರ ಕಚೇರಿಯ ಆವರಣದಲ್ಲಿ ಕೃಷಿ ಪರಿಕರಗಳನ್ನು. ಕೃಷಿ ಯಾಂತ್ರೀಕರಣ ಹಾಗೂ ರಾಗಿ ಪ್ರಾತ್ಯಕ್ಷಿಕೆ ಜೊತೆಗೆ ಜೈವಿಕ ರಸಗೊಬ್ಬರವನ್ನು 20ಕ್ಕೂ ಹೆಚ್ಚು ಫಲಾನುಭವಿಗಳಿಗೆ ಶಾಸಕ ಹಾಗೂ ಕೆ ಎಸ್ ಆರ್ ಟಿ ಸಿ ನಿಗಮ ಮಂಡಳಿ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ವಿತರಿಸಿದರು.   ನರೇಗಾ ಯೋಜನೆಯಡಿ ಕಾಮಗಾರಿಗಳು ಎಲ್ಲೆಲ್ಲಿ ಕಳಪೆ ಆಗಿದೆ ಅದರ ಮಾಹಿತಿಯನ್ನು ಪಡೆದು ತನಿಖೆ ಮಾಡಲಿ, ಅದನ್ನು ಬಿಟ್ಟು ಸದಸ್ಯರು ಹೇಳಿದಾಗೆ ಪಿಡಿಓ ಅವರು ಬಿಲ್ ಮಾಡಿಲ್ಲ…

Read More

ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ತುಮಕೂರು: ಕರ್ತವ್ಯ ನಿರ್ಲಕ್ಷ, ಸರ್ಕಾರಿ ಯೋಜನೆಗಳ ಪ್ರಗತಿ ಕುಂಠಿತ, ಯೋಜನಾನುಷ್ಠಾನದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.   ಜಿಲ್ಲಾ ಪಂಚಾಯತಿಯ ತಮ್ಮ ಕೊಠಡಿಯಲ್ಲಿಂದು ವಿವಿಧ ಯೋಜನೆಗಳ ಪ್ರಗತಿ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಆದ್ಯತೆ ಮೇರೆಗೆ ಕಾಯ್ದುಕೊಳ್ಳಲಾಗುತ್ತಿದೆ. ಕಳಪೆ ಕಾಮಗಾರಿಗಳು ಕಂಡು ಬಂದಲ್ಲಿ ತಾಲ್ಲೂಕು ಪಂಚಾಯತಿ…

Read More

ಪ್ರತಿಭೆಯ ಪ್ರದರ್ಶನವೇ ಪ್ರತಿಭಾ ಕಾರಂಜಿಯ ಮುಖ್ಯ ಉದ್ದೇಶ : ಸತೀಶ್

ತುಮಕೂರು : ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೆ ಇರುತ್ತದೆ ಅದನ್ನು ಗುರುತಿಸಿ ಹೊರಗೆ ತರುವ ಉದ್ದೇಶದಿಂದ ಪ್ರತಿಭಾ ಕಾರಂಜಿಯ ಮುಖ್ಯ ಉದ್ದೇಶವಾಗಬೇಕು ಎಂದು ಶ್ರೀ ವಿಶ್ವ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ತಿಳಿಸಿದರು.         ಅವರು ಶುಕ್ರವಾರ ಮಲ್ಲಸಂದ್ರ ಗ್ರಾಮದ ಶ್ರೀ ವಿಶ್ವ ಭಾರತಿ ಪ್ರೌಡಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ತುಮಕೂರು ಹಾಗು ಮಲ್ಲಸಂದ್ರ ಕ್ಲಸ್ಟರ್ ವತಿಯಿಂದ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ…

Read More

ಹಾಲಿ ಶಾಸಕರು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಮಾಡದಿದ್ದರೂ ಪರವಾಗಿಲ್ಲ ದ್ವೇಷದ ರಾಜಕಾರಣ ಮಾಡಬಾರದು ಮಾಜಿ ಶಾಸಕ ಎಂ.ವಿ.ವಿ ವೀರಭದ್ರಯ್ಯ

ಮದುಗಿರಿ: ಕಳೆದ ಒಂದುವರೆ ವರ್ಷದಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ, ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಿ ಕ್ಷೇತ್ರದಲ್ಲಿ ಸುವ್ಯವಸ್ಥೆ ಕಾಪಾಡಿ ಎಂದು ಮಾಜಿ ಶಾಸಕ ಎಂ.ವಿ.ವಿ ವೀರಭದ್ರಯ್ಯ ತಿಳಿಸಿದರು.     ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಾಲಿ ಶಾಸಕರು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಮಾಡದಿದ್ದರೂ ಪರವಾಗಿಲ್ಲ ದ್ವೇಷದ ರಾಜಕಾರಣ ಮಾಡಬಾರದು, ದ್ವೇಷದ ರಾಜಕಾರಣದಿಂದ ಮನೆ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದ್ದು, 70ರಿಂದ 80 ಸ್ಥಳೀಯ ಸಂಸ್ಥೆ ಚುನಾವಣೆಗಳು ಇನ್ನು ಸಹ ನಡೆದಿಲ್ಲ…

Read More

ಜಲ್ ಜೀವನ್ ಮಿಷನ್ ಕಾಮಗಾರಿಯಲ್ಲಿ ಕಳಪೆ ಕಂಡುಬಂದರೆ ಕ್ರಮ: ಕೇಂದ್ರ ಸಚಿವ ವಿ.ಸೋಮಣ್ಣ

ತುಮಕೂರು: ಜಿಲ್ಲೆಯಲ್ಲಿ ಅನುಷ್ಟಾನಗೊಳ್ಳುತ್ತಿರುವ ಜಲ್‍ಜೀವನ್ ಮಿಷನ್ ಕಾಮಗಾರಿಗಳ ಮೌಲ್ಯ ಪರಿವೀಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಳೀಯ ಶಾಸಕರು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನೊಳಗೊಂಡ ತನಿಖಾ ತಂಡ ರಚಿಸುವಂತೆ ರೈಲ್ವೇ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.   ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿಂದು ನಡೆದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿಯವರ ಕನಸಿನ ಯೋಜನೆಯಾದ ಜಲ್ ಜೀವನ್ ಮಿಷನ್ ಯೋಜನೆ ಅನುಷ್ಟಾನಕ್ಕಾಗಿ ರಾಜ್ಯಕ್ಕೆ 7…

Read More

ಗ್ರಾಮಸ್ಥರ ಸಹಕಾರದಿಂದ ಚಿಂಪುಗಾನಹಳ್ಳಿ ಸರ್ಕಾರಿ ಶಾಲೆಗೆ ಬಂದ ಹೋಸತನ : ಡಾ.ಹನುಮಂತನಾಥ ಸ್ವಾಮೀಜಿ.

ತುಮಕೂರು: ಆಧುನಿಕ ಶಿಕ್ಷಣ ವ್ಯವಸ್ಥೆಯ ಭರಾಟೆಯಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವ ನಿಟ್ಟಿನಲ್ಲಿ ಅತ್ಯುನ್ನತ ಸೌಲಭ್ಯಗಳೂಳ್ಳ ಖಾಸಗಿ ಶಾಲೆಗಳಿಗೆ ಹೋಂದಿಕೊಳ್ಳುತ್ತಿರುವುದು ವಿಪರ್ಯಾಸವಾಗಿದ್ದು ಮತ್ತೊಂದು ಕಡೆ ಸರ್ಕಾರಿ ಶಾಲೆಗಳು ಅವನತಿಯತ್ತ ಸಾಗುತ್ತಿದೆ ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಒಗ್ಗೂಡುವಿಕೆಯಿಂದ ಸರ್ಕಾರಿ ಶಾಲೆಯಲ್ಲಿ ವಿಘ್ನ ನಿವಾರಕ ಗಣಪತಿಯ ವಿಗ್ರಹ ಪ್ರತಿಷ್ಠಾಪನೆ ಮಾಡುವ ಮೂಲಕ ಚಿಂಪುಗಾನಹಳ್ಳಿಯ ಗ್ರಾಮಸ್ಥರು ಸರ್ಕಾರಿ ಶಾಲೆಗೆ ವಿಷೇಶವಾಗಿ ಹೋಸ ಕಳೆ ತಂದು ಕೊಟ್ಟಿರುವುದು ಶ್ಲಾಘನೀಯವೆಂದು ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಡಾ. ಶ್ರೀ ಶ್ರೀ…

Read More

ಅಖಿಲ ಭಾರತ ಅಂಬೇಡ್ಕರ್ ಪ್ರಚಾರ ಸಮಿತಿಯಿಂದ ವಿಶೇಷವಾಗಿ ಮಕ್ಕಳೊಂದಿಗೆ 78ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ತುಮಕೂರು : ಅಖಿಲ ಭಾರತ ಡಾ|| ಅಂಬೇಡ್ಕರ್ ಪ್ರಚಾರ ಸಮಿತಿ ವತಿಯಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ಅಗತ್ಯವಾದ ವಸ್ತುಗಳನ್ನು ಧೇಣಿಗೆಯಾಗಿ ನೀಡುವುದರ ಮೂಲಕ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿ ಗಮನ ಸೆಳೆದರು.       ತುಮಕೂರಿನ ದಿಬ್ಬೂರು ಬಡಾವಣೆಯಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿನ ಮಕ್ಕಳು ಮಧ್ಯಾಹ್ನ ಊಟಕ್ಕೆ ಉಪಯೋಗಿಸಲು ತಟ್ಟೆ, ಲೋಟಗಳು ಹಾಗೂ ಶೈಕ್ಷಣಿಕ ಪರಿಕರಗಳನ್ನು ಧೇಣಿಗೆಯಾಗಿ ನೀಡಿ ವಿಶಿಷ್ಠ ರೀತಿಯಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.     ಶಾಲೆಯಲ್ಲಿ ಧ್ವಜಾರೋಹಣ…

Read More
error: Content is protected !!