
ಜಿಲ್ಲಾ ಸುದ್ದಿಗಳು
ಎತ್ತಿನಹೊಳೆ ಯೋಜನೆ : ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಲು ಸೂಚನೆ
ತುಮಕೂರು: ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಯನ್ನು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಎತ್ತಿನಹೊಳೆ, ರೈಲ್ವೆ, ಹೇಮಾವತಿ, ಕೆಐಎಡಿಬಿ, ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ಈವರೆಗೂ 2679 ಎಕರೆ ಭೂಸ್ವಾಧೀನವಾಗಿದ್ದು, ಯೋಜನೆಗೆ ಅವಶ್ಯವಿರುವ ಉಳಿದ 438 ಎಕರೆ ಭೂಮಿಯನ್ನು 4 ತಿಂಗಳೊಳಗಾಗಿ ಸ್ವಾಧೀನಪಡಿಸಿಕೊಂಡು ಎತ್ತಿನ ಹೊಳೆ…
ಶ್ರೀ ರಾಮಕೃಷ್ಣ ಪರಮಹಂಸರವರ 189ನೇ ಜನ್ಮದಿನಾಚರಣೆ
ತುಮಕೂರು : ಶ್ರೀ ರಾಮಕೃಷ್ಣ ಪರಮಹಂಸರವರ 189ನೇ ಜನ್ಮದಿನಾಚರಣೆಯನ್ನು ಡಾ ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ದಲಿತ ಕ್ರಿಯಾ ಸಮಿತಿಯ ವತಿಯಿಂದ ರಾಮಕೃಷ್ಣ ಪರಮಹಂಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು. ಡಾ ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ದಲಿತ ಕ್ರಿಯಾ ಸಮಿತಿಯ ಜಿಲ್ಲಾಧ್ಯಕ್ಷರಾದ ಎನ್.ಕೆ. ನಿಧಿಕುಮಾರ್ ರಾಮಕೃಷ್ಣರ ಕುರಿತು ಮಾತನಾಡುತ್ತಾ ಶ್ರೀಯುತರು ಭಾರತದ ಪ್ರಸಿದ್ಧ ಧಾರ್ಮಿಕ ನೇತೃಗಳಲ್ಲಿ ಒಬ್ಬರು, ದೇವಿ ಕಾಳಿಕಾಮಾತೆಯ ಆರಾಧಕರಾಗಿದ್ದ ಪರಮಹಂಸರು ಅದ್ವೈತ ವೇದಾಂತ ಸಿದ್ಧಾಂತವನ್ನು ಬೋಧಿಸಿದರಲ್ಲದೆ, ಎಲ್ಲ ಧರ್ಮಗಳೂ ಒಂದೇ ಗುರಿಯತ್ತ…
ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಮಹಾ ಪರಾಕ್ರಮಿ ಶಿವಾಜಿ- ಕೆ, ಎಸ್, ಸಿದ್ದಲಿಂಗಪ್ಪ
ತುಮಕೂರು: ಛತ್ರಪತಿ ಶಿವಾಜಿ ಮಹಾರಾಜರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಮಹಾ ಪರಾಕ್ರಮಿಯಾಗಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಮರಾಠ ಕ್ಷತ್ರಿಯ ಪರಿಷತ್ ಹಾಗೂ ಕರ್ನಾಟಕ ಮರಾಠ ಕ್ಷತ್ರಿಯ ಪರಿಷತ್ತಿನ ಸಹಯೋಗದಲ್ಲಿ ಬುಧವಾರ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ‘ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ…
ರಾಜ್ಯದಲ್ಲಿ ಗುರುತಿಸಲ್ಪಟ್ಟ 7483 ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳಿಗೆ ಗುರುತಿನಚೀಟಿ ವಿತರಣೆ –ಚಂದ್ರಕಲಾ
ತುಮಕೂರು: ರಾಜ್ಯದಲ್ಲಿ 7483 ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‍ಗಳನ್ನು ಪತ್ತೆಹಚ್ಚಿ ಅವರಿಗೆ ಗುರುತಿನಚೀಟಿಯನ್ನು ವಿತರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ ತಿಳಿಸಿದರು. ನಗರದ ಬಾಲ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ನಗರಾಭಿವೃದ್ಧಿ ಕೋಶ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಗುರುವಾರ ನಡೆದ “ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಮಾಹಿತಿ ಸಂಗ್ರಹಣೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಫಾಯಿ ಕರ್ಮಚಾರಿಗಳು ಮಲ ಹೊರುವಂತಹ ಅಮಾನವೀಯ…
ಜೀತ ಪದ್ಧತಿ ನಿರ್ಮೂಲನೆ ನಮ್ಮೆಲ್ಲರ ಜವಾಬ್ದಾರಿ-ಜಿ.ಪ್ರಭು
ತುಮಕೂರು: ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಅವರು ಹೇಳಿದರು. ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ‘ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಮತ್ತು ಕಾರ್ಯಾಗಾರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ಕಳೆದರೂ ಜೀತ ಪದ್ಧತಿ ಇನ್ನೂ ಜೀವಂತವಾಗಿರುವುದು ಶೋಚನೀಯ ಸಂಗತಿ. ಆರ್ಥಿಕವಾಗಿ ಹಿಂದುಳಿದವರು ಜೀತ…
ಯುವ ಸಮುದಾಯ ಶಿಕ್ಷಣದ ಜೊತೆಗೆ ಸಾಮಾಜಿಕ, ಧಾರ್ಮಿಕ ಕಳಕಳಿ ಹೊಂದಿದಾಗ ಸಮಾಜದಲ್ಲಿ ಬದಲಾವಣೆ ಸಾಧ್ಯ ಮುರಳೀಧರ ಹಾಲಪ್ಪ
ಗುಬ್ಬಿ: ಇಂದಿನ ಯುವ ಸಮುದಾಯ ಶಿಕ್ಷಣದ ಜೊತೆಗೆ ಸಾಮಾಜಿಕ, ಧಾರ್ಮಿಕ ಕಳಕಳಿ ಹೊಂದಿದಾಗ ಸಮಾಜದಲ್ಲಿ ಬದಲಾವಣೆ ಸಾಧ್ಯವಾಗುತ್ತದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಮುರಳೀಧರ ಹಾಲಪ್ಪ ಅಭಿಪ್ರಾಯಪಟ್ಟರು. ತಾಲೂಕಿನ ನಿಟ್ಟೂರು ಹೋಬಳಿ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಾಲಯದ ಉದ್ಘಾಟನೆ ಹಾಗೂ ಕಲಶರೋಹಣ ಧ್ವಜಸ್ತಂಬ ಪ್ರತಿಷ್ಠಾಪನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದಿನ ಯುವಜನತೆಯಲ್ಲಿ ಯಾವುದು ಒಳಿತು, ಯಾವುದು ಕೆಡುಕು ಎಂದು ಚಿಂತಿಸುವ ಸಾಮರ್ಥ್ಯವಿದೆ. ಯಾವುದೇ ನಿರ್ಧಾರ ತೆಗೆದುಕೊಳ್ಳುವ…
ಸೂಕ್ತ ಚಿಕಿತ್ಸೆಯಿಂದ ಕುಷ್ಠರೋಗಿಗಳು ಸಂಪೂರ್ಣ ಗುಣಮುಖರಾಗಲು ಸಾಧ್ಯವಿದೆ-ನೂರುನ್ನಿಸಾ
ತುಮಕೂರು : ಸೂಕ್ತ ಚಿಕಿತ್ಸೆಯಿಂದ ಕುಷ್ಠರೋಗವನ್ನು ಸಂಪೂರ್ಣವಾಗಿ ಗುಣಮುಖಪಡಿಸಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ತಿಳಿಸಿದರು. ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸುಮಾರು ವರ್ಷಗಳ ಹಿಂದೆ ಕುಷ್ಠರೋಗವು ಯಾವುದೇ ಔಷಧೋಪಚಾರವಿಲ್ಲದೆ ಗುಣಮುಖವಾಗದ ಖಾಯಿಲೆಯಾಗಿತ್ತು. ಕುಷ್ಠರೋಗಿಗಳನ್ನು ಅಸ್ಪಶ್ಯರಂತೆ ಕಾಣುವ ವ್ಯವಸ್ಥೆಯಿತ್ತು. ಪ್ರಸ್ತುತ ಕುಷ್ಠರೋಗಕ್ಕೆ ಉಚಿತ…
76ನೇ ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್ ಅವರಿಗೆ ಅವಮಾನ: ಬಾಬಾ ಸಾಹೇಬ್ ಅವರ ಭಾವಚಿತ್ರ ಇಡದೆ ದಿನಾಚರಣೆ
ತುಮಕೂರು: ಸಂವಿಧಾನ ಶಿಲ್ಪಿ ಭಾರತ ರತ್ನ ಡಾಬಿ ಆರ್ ಅಂಬೇಡ್ಕರ್ ಅವರು ಭಾರತ ಸೇರಿದಂತೆ ಇತರೆ ರಾಷ್ಟ್ರಗಳಿಗೆ ನೀಡಿದ ಸಂವಿಧಾನ ಮಾದರಿಯಾಗಿದ್ದು ದೇಶ ವಿದೇಶಗಳಲ್ಲಿ ಅಂಬೇಡ್ಕರ್ ಅವರನ್ನು ಪ್ರಜಾಪ್ರಭುತ್ವದ ಜ್ಞಾನಿಯೆಂದು ಪೂಜಿಸುತ್ತಿದ್ದಾರೆ ಇಂತಹದರ ನಡುವೆ ಭಾರತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ವಿಶೇಷ ಸ್ಥಾನಮಾನಗಳಿದ್ದು ಎಲ್ಲಾ ರಾಜ್ಯ ಸರ್ಕಾರಗಳು ರಾಷ್ಟ್ರೀಯ ದಿನಾಚರಣೆಗಳ ಸಮಯ ಸಂದರ್ಭದಲ್ಲಿ ಕಡ್ಡಾಯವಾಗಿ ಅಂಬೇಡ್ಕರ್ ಅವರ ಫೋಟೋಗಳನ್ನು ಇಟ್ಟು ಪೂಜಿಸಬೇಕು ಎಂಬ ಆದೇಶವಿದ್ದರೂ ಕೂಡಾ ಇದನ್ನ ಧಿಕ್ಕರಿಸಿ ಅಂಬೇಡ್ಕರ್ ಅವರ ಭಾವಚಿತ್ರ ಇರದೆ 76ನೇ…
ಸ್ಥಳೀಯ ಸಂಸ್ಥೆಗಳಿಗೆ ಕಾಲ-ಕಾಲಕ್ಕೆ ಚುನಾವಣೆ ನಡೆದರೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಆಯೋಗದ ಅಧ್ಯಕ್ಷ ಡಾ: ಸಿ. ನಾರಾಯಣಸ್ವಾಮಿ
ತುಮಕೂರು: ಸ್ಥಳೀಯ ಸಂಸ್ಥೆಗಳಿಗೆ ಕಾಲ-ಕಾಲಕ್ಕೆ ಚುನಾವಣೆಗಳು ನಡೆದಾಗ ಮಾತ್ರ ಹಣಕಾಸು ಆಯೋಗವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡಲಿದೆ ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ: ಸಿ. ನಾರಾಯಣಸ್ವಾಮಿ ತಿಳಿಸಿದರು. ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ 5ನೇ ರಾಜ್ಯ ಹಣಕಾಸು ಆಯೋಗದ ವಿಷಯಗಳ ಕುರಿತು ಜಿಲ್ಲಾ ಪಂಚಾಯತಿಯಲ್ಲಿ ಬುಧವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೇಂದ್ರ ಹಣಕಾಸು ಆಯೋಗವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡುವ ಸಂದರ್ಭದಲ್ಲಿ…
ಸಮಾಜದಲ್ಲಿಂದು ಸೈಬರ್ ಸುರಕ್ಷತೆ ಪ್ರಮುಖ ಪಾತ್ರ ವಹಿಸುತ್ತಿದೆ : ಡಾ.ವಿವೇಕ ವೀರಯ್ಯ
ತುಮಕೂರು: ಇಂದಿನ ಪರಸ್ಪರ ಸಂಪರ್ಕಿತ ಡಿಜಿಟಲ್ ಪರಿಸರದಲ್ಲಿ ವಿವಿಧ ಕ್ಷೇತ್ರಗಳ ಮಾಹಿತಿಯನ್ನು ರಕ್ಷಿಸಲು ಸೈಬರ್ ಸುರಕ್ಷತೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಸಾಹೇ ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ ವೀರಯ್ಯ ಅವರು ಅಭಿಪ್ರಾಯಪಟ್ಟರು. ನಗರದ ಕ್ಯಾತಸಂದ್ರದ ಬಳಿಯಿರುವ ಶ್ರೀ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿಂಗ್ ನಲ್ಲಿ ಏರ್ಪಡಿಸಲಾಗಿದ್ದ ಒಂದು ವಾರದ ಪ್ರಾಧ್ಯಾಪಕರ ಪ್ರಗತಿ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ‘ಇ-ಆಡಳಿತದ ಸುರಕ್ಷತೆ, ಸೈಬರ್ ಭದ್ರತೆ ಸಮ್ಮೀಲನದ ವಸ್ತುಸ್ಥಿತಿ ಹಾಗೂ ಆಧುನಿಕ ಕಾಲಘಟ್ಟದ ತಂತ್ರಜ್ಞಾನದಲ್ಲಿ ಕೃತಕ ಬುದ್ದಿಮತ್ತೆ’ ವಿಷಯ ಕುರಿತ ಉಪನ್ಯಾಸ…