ಪ್ರಮುಖ ಸುದ್ದಿಗಳು
ಗ್ರಾಮೀಣ ಪ್ರದೇಶದ ಜನರಿಗೆ ವಕೀಲರು ಕಾನೂನು ಅರಿವು ಮೂಡಿಸಿ- ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ*
ತುಮಕೂರು: ಕಾನೂನು ಬಲ್ಲವರಾದ ನೀವುಗಳು ಹಳ್ಳಿಗಳಿಗೆ ತೆರಳಿ ಜನಸಾಮಾನ್ಯರಿಗೆ ಕಾನೂನಿನ ಅರಿವು ಮೂಡಿಸಿ ಎಂದು ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ವಕೀಲರಿಗೆ ಸಲಹೆ ನೀಡಿದರು. ತುಮಕೂರು ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ತುಮಕೂರು ಜಿಲ್ಲಾ ವಕೀಲರ ಸಂಘ(ರಿ) ಮತ್ತು ಕರ್ನಾಟಕ ಲೋಕಾಯುಕ್ತ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಆಡಳಿತ ಮತ್ತು ಸಾರ್ವಜನಿಕ ಸೇವೆಯಲ್ಲಿ ವಕೀಲರ ಪಾತ್ರ ಕುರಿತು ಮಾತನಾಡಿದ ಅವರು, ಕಪ್ಪು ಕೋಟು ಹಾಕಿಕೊಂಡವರ ಮೇಲೆ ಸಮಾಜದಲ್ಲಿ ಭಯ ಮತ್ತು ಗೌರವ ಎರಡೂ ಇರುತ್ತದೆ….
ಗುಡುಗು-ಸಿಡಿಲು ಸಹಿತ ಮಳೆ : ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಿದ- ಜಿಲ್ಲಾಧಿಕಾರಿ
ತುಮಕೂರು : ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ :- ಭಾರಿ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ…
ದೂರುಗಳು ದುರುದ್ದೇಶಗಳಿಂದ ಕೂಡಿರಬಾರದು : ನ್ಯಾ: ಫಣೀಂದ್ರ.
ತುಮಕೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಒದಗಿಸುವಲ್ಲಿ ಅಧಿಕಾರಿ/ಸಿಬ್ಬಂದಿಗಳಿಂದ ವಿಳಂಬ ಹಾಗೂ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಸಲ್ಲಿಸುವ ದೂರುಗಳು ವೈಯಕ್ತಿಕ ದ್ವೇಷ ಹಾಗೂ ದುರುದ್ದೇಶಗಳಿಂದ ಕೂಡಿರಬಾರದು ಎಂದು ಕರ್ನಾಟಕ ರಾಜ್ಯ ಲೋಕಾಯುಕ್ತದ ಗೌರವಾನ್ವಿತ ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ತಿಳಿಸಿದರು. ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಶುಕ್ರವಾರ ಕರ್ನಾಟಕ ಲೋಕಾಯುಕ್ತ ಕಚೇರಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕರಿಂದ ಕುಂದು ಕೊರತೆ ಅಹವಾಲುಗಳ ಸ್ವೀಕಾರ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ…
ಒಳಮೀಸಲಾತಿ ಜಾರಿಗೊಳಿಸದಿದ್ದರೆ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಸಿಎಂ, ಸಚಿವರಿಗೆ ರಾಜ್ಯದೆಲ್ಲೆಡೆ ಘೇರಾವ್ ಮಾಡುವುದಾಗಿ ಮುಖಂಡರ ಎಚ್ಚರಿಕೆ
ಒಳಮೀಸಲಾತಿ ಜಾರಿಗೊಳಿಸದಿದ್ದರೆ ತುಮಕೂರು: ಸರ್ವೋಚ್ಛ ನ್ಯಾಯಾಲಯದ ಪೀಠದ ತೀರ್ಪಿನಂತೆ ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಮಾದಿಗ ಸಂಘಟನೆಗಳ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಈ ತಿಂಗಳ 18ರಂದು ನಡೆಯುವ ಸಚಿ ಸಂಪುಟ ಸಭೆ ಅಧಿವೇಶನದಲ್ಲಿ ಒಳಮೀಸಲಾತಿ ವರ್ಗೀಕರಣ ಜಾರಿ ಸಂಬಂಧ ತೀರ್ಮಾನ ಮಾಡಬೇಕು, ತಪ್ಪಿದಲ್ಲಿ ರಾಜ್ಯಾದ್ಯಂತ ಮುಖ್ಯಮಂತ್ರಿ, ಮಂತ್ರಿಗಳನ್ನು ಘೇರಾವ್ ಮಾಡಲಾಗುವುದು, ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಮುಖಂಡರು ಸರ್ಕಾರಕ್ಕೆ…
ಮೋಜು ಮಸ್ತಿಯ ಕಡೆ ದಿಕ್ಕು ಬದಲಿಸುತ್ತಿದೆಯೇ ದೀಕ್ಷಾ ಭೂಮಿ ಯಾತ್ರೆ
ಮಹಾರಾಷ್ಟ್ರದ ನಾಗಪುರದಲ್ಲಿ ಡಾ ಬಾಬಾ ಸಾಹೇಬ್ ಬಿ ಆರ್ ಅಂಬೇಡ್ಕರ್ ಅವರು ಬೌದ್ಧ ಧಮ್ಮದ ದೀಕ್ಷಾ ಪಡೆದ ಭೂಮಿಯನ್ನು ದೀಕ್ಷಾ ಭೂಮಿಯೆಂದು ಗುರುತಿಸಿ ಈ ಪುಣ್ಯ ಭೂಮಿಗೆ ಬೌದ್ಧ ಧರ್ಮದ ಯಾತ್ರಾ ಕೇಂದ್ರವಾಗಿ ಪರಿಗಣಿಸಿ ಸರ್ಕಾರ ಪ್ರತಿ ವರ್ಷವೂ ನಾಗಪುರಕ್ಕೆ ಹಲವು ರಾಜ್ಯಗಳಿಂದ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳಿಗೆ ದೀಕ್ಷಾಭೂಮಿ ದರ್ಶನ ಪಡೆದು ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಅದರಂತೆ ಕಳೆದ ಐದು ವರ್ಷಗಳಿಂದ ಕರ್ನಾಟಕ ರಾಜ್ಯದಿಂದಲೂ ಸಹ ಬಹಳಷ್ಟು ಅಂಬೇಡ್ಕರ್ ಅವರ…
ಜಿಲ್ಲೆಯಲ್ಲಿ ಮುಂದಿನ 03 ದಿನಗಳ ಕಾಲ *ಗುಡುಗು/ಸಿಡುಲು ಸಹಿತ ಭಾರಿ ಮಳೆಯಾಗುವ* ಸಾಧ್ಯತೆ ಹೆಚ್ಚಾಗಿರುವುದರಿಂದ ಜಿಲ್ಲೆಗೆ Orange & Yellow ಅಲರ್ಟ್
ಜಿಲ್ಲೆಯಲ್ಲಿ ಮುಂದಿನ 03 ದಿನಗಳ ಕಾಲ *ಗುಡುಗು/ಸಿಡುಲು ಸಹಿತ ಭಾರಿ ಮಳೆಯಾಗುವ* ಸಾಧ್ಯತೆ ಹೆಚ್ಚಾಗಿರುವುದರಿಂದ ಜಿಲ್ಲೆಗೆ Orange & Yellow ಅಲರ್ಟ್ ನೀಡಲಾಗಿದೆ ಎಂದು ತಹಶೀಲ್ದಾರ್ ಆರತಿ ಬಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರಿಗೆ ಸಿಡಲು/ಭಾರಿ ಮಳೆಯಿಂದ ಸುರಕ್ಷಿತರಾಗಿರಲು ಅರಿವು ಮೂಡಿಸುವುದು, ಮಣ್ಣಿನ ಮನೆ/ಕಟ್ಟಡಗಳು, ದುರ್ಬಲ ಮರದ ಕೊಂಬೆಗಳು, ಜಲಕಾಯ/ವಿದ್ಯುತ್ ವಸ್ತುಗಳಿಂದ ದೂರವಿರುವ ಬಗ್ಗೆ ಎಚ್ಚರವಹಿಸಲು ವ್ಯಾಪಕ ಪ್ರಚಾರ ನೀಡುವುದು, ಶಾಲೆ/ಅಂಗನವಾಡಿ ಮೇಲ್ಚಾವಣಿ/ಗೋಡೆಗಳ ಸುಸ್ಥಿತಿ ಪರಿಶೀಲಿಸುವುದು, ನದಿ/ಹಳ್ಳ/ಕೆರೆ/ಕಟ್ಟೆ/ರಸ್ತೆ/ಸೇತುವೆ/ವಿದ್ಯುತ್ ಸಂಪರ್ಕ ಇತ್ಯಾದಿ ಮೂಲಭೂತ ಸೌಕರ್ಯಗಳ…
ತುಮಕೂರು ದಸರಾ ಉತ್ಸವ ಗಮನ ಸೆಳೆದ ಮಿನಿ ಮ್ಯಾರಥಾನ್
ತುಮಕೂರು ದಸರಾ ಉತ್ಸವ ಃ ಗಮನ ಸೆಳೆದ ಮಿನಿ ಮ್ಯಾರಥಾನ್ ಸದ್ಯದಲ್ಲೇ ಇಂಟರ್ ನ್ಯಾಷನಲ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಆಯೋಜನೆ: ಸಚಿವ ಪರಮೇಶ್ವರ್ ತುಮಕೂರು: ತುಮಕೂರು ದಸರಾ ಉತ್ಸವ ಅಂಗವಾಗಿ ನಗರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಮಿನಿ ಮ್ಯಾರಥಾನ್‍ನಲ್ಲಿ ಸಾರ್ವಜನಿಕರು ಉತ್ಸಾಹದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಿನಿ ಮ್ಯಾರಥಾನ್‍ಗೆ ಬಾವುಟ ತೋರುವ ಮೂಲಕ ಚಾಲನೆ ನೀಡಿದ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಯುವ ಸಮುದಾಯ…
ಬೋನಿಗೆ ಬಿದ್ದ ಚಿರತೆ
ತಿಪಟೂರು.ಹೊನ್ನವಳ್ಳಿ ಹೋಬಳಿಯ ಹುರುಳಿ ಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರ ನಿದ್ದೆ ಕೆಡಿಸಿದ್ದ ಚಿರತೆಯೊಂದು ಸೆರೆ ಸಿಕ್ಕಿದೆ. ಗ್ರಾಮಸ್ಥರು ಹೇಳುವ ಪ್ರಕಾರ ಇನ್ನೂ ಮೂರು ನಾಲ್ಕು ಚಿರತೆಗಳು ಗುಂಪು ಗುಂಪಾಗಿ ಓಡಾಡುತ್ತವೆ, ರಾತ್ರಿ ವೇಳೆಯಲ್ಲಿ ತೋಟಕ್ಕೆ ತೆರಳಲು ಚಿರತೆ ಹಾವಳಿಯಿಂದಾಗಿ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವಂತಹ ಪರಿಸ್ಥಿತಿ ಇದೆ. ಇನ್ನು ಸೆರೆಸಿಕ್ಕ ಚಿರತೆಯನ್ನು ದೂರ ಬಿಡದೆ,ಕೇವಲ 6 ಕಿ.ಮೀ ಅಂತರದಲ್ಲಿರುವ ಹಾಲ್ಕುರಿಕೆ ಮೀಸಲು ಅರಣ್ಯಕ್ಕೆ ಬಿಡಲಾಗಿದೆ. ಹತ್ತಿರದಲ್ಲಿ ಬಿಟ್ಟಿರುವುದರಿಂದ ಹುರುಳಿಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ…
ವೈಭವಯುತ ತುಮಕೂರು ದಸರಾಕ್ಕೆ ಚಾಲನೆ : ಜಿಲ್ಲಾಧಿಕಾರಿ ಶುಭ ಕಲ್ಯಾಣ್
ತುಮಕೂರು : ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿರುವ ವೈಭವಯುತ ತುಮಕೂರು ದಸರಾ ಉತ್ಸವವು ಗುರುವಾರದಿಂದ ಪ್ರಾರಂಭಗೊಂಡಿದ್ದು, ಅಕ್ಟೋಬರ್ 12ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಸಂಸ್ಕøತಿ ಹಾಗೂ ಧಾರ್ಮಿಕ ಆಚರಣೆಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ತುಮಕೂರು ದಸರಾ ಉತ್ಸವವನ್ನು ಆಚರಿಸಲಾಗುತ್ತಿದೆ. ಇಂದು ಬೆಳಿಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಶ್ರೀ…
ಗುಬ್ಬಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವತಿಯಿಂದ 68 ಒಕ್ಕೂಟಗಳ ಪದಾಧಿಕಾರಿಗಳ ಸಮಾವೇಶ
ಗುಬ್ಬಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, BC TRUST ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ವತಿಯಿಂದ ತಾಲೂಕಿನ 68 ಒಕ್ಕೂಟಗಳ ಪದಾಧಿಕಾರಿಗಳ ಸಮಾವೇಶ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು . ಈ ಕಾರ್ಯಕ್ರಮವನ್ನು ತುಮಕೂರು ಜಿಲ್ಲೆಯ ಗೌರವಾನ್ವಿತ ನಿರ್ದೇಶಕರಾದ ಸತೀಶ್ ಸುವರ್ಣ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ರೀಜಿನಲ್ ಮ್ಯಾನೇಜರ್ ಬಮ್ ಶಂಕರ್ ಮಿಶ್ರ, ಚೀಫ್ ಮ್ಯಾನೇಜರ್ ಶಾಲಿನಿ ಕುಮಾರಿ ಮೇಡಂ, ಅಸಿಸ್ಟೆಂಟ್ ಮ್ಯಾನೇಜರ್ ಅದ ಚಿನ್ನ ಸರ್ ಹಾಗೂ ಜನಜಾಗೃತಿ ವೇದಿಕೆಯ…