
ಪ್ರಮುಖ ಸುದ್ದಿಗಳು
ಡಿಸೆಂಬರ್ 14ರಂದು ಸಾಹೇ(ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ :
876 ವಿದ್ಯಾರ್ಥಿಗಳಿಗೆ ಪದವಿ: 10 ಮಂದಿಗೆ ಚಿನ್ನದ ಪದಕ * ವೈದ್ಯಕೀಯ-01 * ದಂತ ವೈದ್ಯಕೀಯ- 02 *ಎಂಜಿನಿಯರಿಂಗ್-06 *ಎಂಸಿಎ-01 ಸೇರಿದಂತೆ 10ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ. ತುಮಕೂರು: ನಗರದ ಅಗಲಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ (ಡಿಸೆಂಬರ್ 14ರಂದು) ಬೆಳಿಗ್ಗೆ 10-30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ ಆಯೋಜಿಸಲಾಗಿದೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು….
876 ವಿದ್ಯಾರ್ಥಿಗಳಿಗೆ ಪದವಿ: 10 ಮಂದಿಗೆ ಚಿನ್ನದ ಪದಕ
ಡಿಸೆಂಬರ್ 14ರಂದು ಸಾಹೇ(ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ : * ವೈದ್ಯಕೀಯ-01 * ದಂತ ವೈದ್ಯಕೀಯ- 02 *ಎಂಜಿನಿಯರಿಂಗ್-06 *ಎಂಸಿಎ-01 ಸೇರಿದಂತೆ 10ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ. ತುಮಕೂರು: ನಗರದ ಅಗಲಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ (ಡಿಸೆಂಬರ್ 14ರಂದು) ಬೆಳಿಗ್ಗೆ 10-30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ ಆಯೋಜಿಸಲಾಗಿದೆ ಎಂದು…
ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ* *ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ
ಬೆಳಗಾವಿ ಸುವರ್ಣಸೌಧ,: ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನ ಪರಿಷತ್‌ನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ…
*ವಿರೋಧ ಪಕ್ಷಗಳ ಆರೋಪ ಸುಳ್ಳು ಹಾಗೂ ಸತ್ಯಕ್ಕೆ ದೂರವೆಂದ ಸಿಎಂ*
*ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಳಗಾವಿ ಸುವರ್ಣಸೌಧ,: ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 2,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ. ಎ. ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಸದ್ರಿ ಯೋಜನೆಗಳಿಗೆ ಆಯವ್ಯಯ ದಲ್ಲಿ 52,009…
ಕಠಿಣ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ.ಕೆ.ಟಿ.ಸುಂದರಮೂರ್ತಿ
ತುಮಕೂರು : ಕಠಿಣ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ಸನ್ನ ಸಾಧಿಸಲು ಸಾಧ್ಯವಾಗುತ್ತದೆ. ಪ್ರಾಮಾಣಿಕವಾಗಿ ನಿರಂತರ ಸಾಧನೆಯಲ್ಲಿ ತೊಡಗಿಸಿಕೊಂಡರೆ ಸಫಲತೆ ಕಾಣಬಹುದು ಎಂದು ಇಸ್ರೋದ ಮಾಜಿ ಪ್ರಾಜೆಕ್ಟ್ ಇಂಜಿನಿಯರ್ ಹಾಗೂ ವಿಜ್ಞಾನಿ ಕೆ.ಟಿ. ಸುಂದರಮೂರ್ತಿ ವಿದ್ಯಾರ್ಥಿಗಳಿಗೆ ಕರೆಕೊಟ್ಟರು. ತುಮಕೂರಿನ ಗೊಲ್ಲಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 18ನೇ ಬ್ಯಾಚ್‍ನ ಹಳೆ ವಿದ್ಯಾರ್ಥಿಗಳು ಆಯೋಜಿಸಿದ್ದ ಹಳೆ ವಿದ್ಯಾರ್ಥಿಸಂಘದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ನವೋದಯ ವಿದ್ಯಾಲಯದ ಕಾರ್ಯ ಚಟುವಟಿಕೆಗಳು ಹಾಗೂ ವಿದ್ಯಾರ್ಥಿಗಳ ಸಾಧನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. …

ಬಾಬಾಸಾಹೇಬರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವು ನಡೆಯಬೇಕು ಶ್ರೀಮತಿ ಬಿ.ವಿ.ಅಶ್ವಿಜ
ತುಮಕೂರು : ಮಹಾನಗರ ಪಾಲಿಕೆ ಆವರಣದಲ್ಲಿ ಬಾಬಾ ಸಾಹೇಬ್ ಡಾ|| ಬಿ.ಆರ್.ಅಂಬೇಡ್ಕರ್ ರವರ ಪುಣ್ಯಸ್ಮರಣೆಯ 68 ನೇ ಮಹಾಪರಿನಿಬ್ಬಾಣ ಭೀಮ ಸಂಕಲ್ಪ ದಿವಸ್ ಆಚರಣೆಯನ್ನು ಅಖಿಲ ಭಾರತ ಡಾ|| ಅಂಬೇಡ್ಕರ್ ಪ್ರಚಾರ ಸಮಿತಿಯ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ವತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿ ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ಬಿ.ವಿ.ಅಶ್ವಿಜರವರು ಮಾತನಾಡಿ ಬಾಬಾ ಸಾಹೇಬರು ಯಾವುದೇ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ,…

ಮೊಬೈಲ್ ಕೇವಲ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ವಸ್ತುವಾಗಬೇಕೇ ಹೊರತು, ಮಾರಕ ವಸ್ತುವಾಗಬಾರದು ಡಾ, ಲಕ್ಷ್ಮಣ್ ದಾಸ್
ತಿಪಟೂರು: ಮೊಬೈಲ್ ಕೇವಲ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ವಸ್ತುವಾಗಬೇಕೇ ಹೊರತು, ಮಾರಕ ವಸ್ತುವಾಗಬಾರದು ವಿದ್ಯಾರ್ಥಿಗಳು ಮೊಬೈಲ್ ಅನ್ನು ಪಕ್ಕಕ್ಕಿಟ್ಟು ಪುಸ್ತಕ ಹಿಡಿದು ಓದಬೇಕು. ಯಾವುದಾದರೂ ಸರಿಯೇ ಒಳ್ಳೆಯದನ್ನು ಕಲಿಯಬೇಕು ಎಂದು ಪ್ರಸಿದ್ಧ ರಂಗಭೂಮಿ ಕಲಾವಿದರು ಮತ್ತು ಕೇಂದ್ರಸಾಹಿತ್ಯ ನಾಟಕ ಅಕಾಡಮಿ ಪ್ರಶಸ್ತಿ ಪುರಸ್ಕೃತರಾದ ಡಾ|| ಲಕ್ಷ್ಮಣ ದಾಸ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25 ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ, ಎನ್.ಎಸ್.ಎಸ್., ಎನ್. ಸಿ. ಸಿ., ದಿ ಭಾರತ್ ಸ್ಕೌಟ್ಸ್ ಅಂಡ್…
ತುಮಕೂರು ಜಿಲ್ಲಾ ವಕೀಲರ ಸಂಘದಲ್ಲಿ ವಕೀಲರ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ
ತುಮಕೂರು:ನಗರದ ಜಿಲ್ಲಾ ವಕೀಲರ ಸಂಘದಲ್ಲಿ ಇಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್ ರವರು ವಕೀಲರ ದಿನಾಚರಣೆ ಪ್ರಯುಕ್ತ ವಕೀಲರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯನವರು ಇಂದು ಭಾರತದ ಪ್ರಥಮ ರಾಷ್ಟ್ರಪತಿ ಡಾ||ಬಾಬುರಾಜೇಂದ್ರಪ್ರಸಾದ್ ರವರ ಹುಟ್ಟುಹಬ್ಬದ ನಿಮಿತ್ತ ವಕೀಲರ ದಿನಾಚರಣೆಯನ್ನು ಪ್ರಪಂಚದಾದ್ಯಂತ ಆಚರಿಸುತ್ತಿದ್ದು,ವಕೀಲರು ದೇಶದ ಕಣ್ಣು ನೊಂದವರ ಕಣ್ಣೀರು ಒರೆಸಿ ನ್ಯಾಯಾಲಯದ ಮೂಲಕ ನ್ಯಾಯದಾನ ಒದಗಿಸುವಲ್ಲಿ ವಕೀಲರ…
ಮನುಷ್ಯರು ಮನುಷ್ಯರಾಗಿ ಬದುಕಲು ಅವಕಾಶ ಕಲ್ಪಿಸಿದ ವಿಶ್ವ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್- ಅಪಾರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ
ತುಮಕೂರು: ಸಮಾಜದಲ್ಲಿ ಜಾತಿ, ಧರ್ಮಗಳ ಸಂಕೋಲೆಗಳಿಂದ ಮುಕ್ತರಾಗಿ ಸಂವಿಧಾನದ ಮೂಲಕ ಮನುಷ್ಯರು ಮನುಷ್ಯರಾಗಿ ಬದುಕಲು ಅವಕಾಶ ಕಲ್ಪಿಸಿದ ವಿಶ್ವ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್ ಅವರು ನವ ಭಾರತದ ನಿರ್ಮಾಣಕ್ಕೆ ಶ್ರಮಿಸಿದವರಲ್ಲಿ ಅಗ್ರ ಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದು ಅಪಾರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಎಂಪ್ರೆಸ್ ಶಾಲಾ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ಭಾರತ ಸಂವಿಧಾನ ದಿನಾಚರಣೆ ಹಾಗೂ ವಿಶೇಷ…
ಗುಡುಗು-ಸಿಡಿಲು ಸಹಿತ ಮಳೆ : ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಿದ ಜಿಲ್ಲಾಧಿಕಾರಿ
ತುಮಕೂರು : ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 5 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ :- ಭಾರಿ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕೆಂದು ಅಧಿಕಾರಿಗಳಿಗೆ ಸೂಚನೆ…