ಪ್ರಮುಖ ಸುದ್ದಿಗಳು
ಬಿಜೆಪಿ ನಾಯಕರ ಹೋರಾಟ ತಡೆದ ಸರ್ಕಾರದ ಕ್ರಮಕ್ಕೆ ಖಂಡನೆ
ರಸ್ತೆ ತಡೆದು ಧರಣಿ ನಡೆಸಿ ಬಿಜೆಪಿ ಮುಖಂಡರ ಆಕ್ರೋಶ ತುಮಕೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ತೆರಳುತ್ತಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕರು, ಮುಖಂಡರನ್ನು ಪೊಲಿಸರು ಮಾರ್ಗ ಮಧ್ಯೆ ತಡೆದು ಅವರನ್ನು ವಶಕ್ಕೆ ಪಡೆದ ಕ್ರಮ ಖಂಡಿಸಿ ಶುಕ್ರವಾರ ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಬಿಜೆಪಿಯ ಪ್ರತಿಭಟನೆ ಹತ್ತಿಕ್ಕುವ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಗ್ರಾಮಾಂತರ ಕ್ಷೇತ್ರದ…
ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಪಡಿಸಬೇಕು : ಡಾ: ಜಿ. ಪರಮೇಶ್ವರ್
ತುಮಕೂರು: ಗ್ರಾಮೀಣ ಪ್ರದೇಶಗಳನ್ನು ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಅಭಿವೃದ್ಧಿಪಡಿಸಿದಾಗ ಮಾತ್ರ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಹೊರವಲಯದ ಹೆಗ್ಗೆರೆ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಗುರುವಾರ ನಡೆದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಆಶಯದಂತೆ ಸ್ಥಳೀಯ ಆಡಳಿತವನ್ನು ಬಲಗೊಳಿಸಲು ಗ್ರಾಮ…
ಶಾಸಕರಿಗೆ ಮನವಿ ಸಲ್ಲಿಸಿದ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು
ತುರುವೇಕೆರೆ: ಸರ್ಕಾರಿ ನೌಕರರ ಬೇಡಿಕೆಗಳಾದ ಹಳೇ ಪಿಂಚಣಿ ಜಾರಿ, 7ನೇ ವೇತನ ಆಯೋಗದ ವರದಿಯ ಅನುಷ್ಠಾನ, ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡುವ ಬಗ್ಗೆ ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸಿ ಕೂಡಲೇ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ ತಾಲ್ಲೂಕು ಕಛೇರಿಯಲ್ಲಿ ಭೇಟಿಯಾಗಿ ಬೇಡಿಕೆ ಈಡೇರಿಕೆಗೆ ಮನವಿ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ತುರುವೇಕೆರೆ ತಾಲೂಕು ಘಟಕದ ಪದಾಧಿಕಾರಿಗಳನ್ನು ಕುರಿತು ಮಾತನಾಡಿದ ಅವರು, ಮಾರುಕಟ್ಟೆಯಲ್ಲಿ ಕೇಂದ್ರ…
ವಿಶ್ವಕರ್ಮ ಸಮಾಜದಿಂದ ಕೊಡಗೀಹಳ್ಳಿ ಗ್ರಾಪಂ ಅಧ್ಯಕ್ಷೆ ಶೋಭಾ ಸೀನಾಚಾರ್ ಗೆ ಸನ್ಮಾನ
ತುರುವೇಕೆರೆ: ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಕೊಡಗೀಹಳ್ಳಿ ಗ್ರಾಮ ಪಂಚಾಯ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶೋಭಾಸೀನಾಚಾರ್ ಅವರನ್ನು ಸನ್ಮಾನಿಸಲಾಯಿತು. ಪಟ್ಟಣದ ಬಾವಿಕೇರಿಯ ಶ್ರೀ ಕಾಳಿಕಾಂಬ ವಿಶ್ವಕರ್ಮ ಸಮುದಾಯ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಶೋಭಾ ಸೀನಾಚಾರ್ ಅವರನ್ನು ಶಾಲು ಹೊದಿಸಿ, ಫಲಪುಷ್ಪ ಕಾಣಿಕೆ ನೀಡಿ ಗೌರವಿಸಲಾಯಿತು. ಸಮಾರಂಭ ಕುರಿತು ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಟಿ.ಎನ್. ಅರುಣ್ ಕುಮಾರ್ ಮಾತನಾಡಿ, ಅಂದು ವಿಶ್ವಕರ್ಮ ಸಮುದಾಯ ಕೇವಲ ದೇವರ ವಿಗ್ರಹ, ಮರಗೆಲಸದಂತಹ…
ದುರುಪಯೋಗ ತಡೆಗಟ್ಟಲು ಹೈ ರೆಸ್ಯೂಲೆಷನ್ ಜಾಮರ್ ಅಳವಡಿಕೆ: ಗೃಹ ಸಚಿವ ಪರಮೇಶ್ವರ
ಬೆಂಗಳೂರು:-ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ರೆಸ್ಯೂಲೇಷನ್ ಜಾಮರ್‌ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಸುಧರಣಾ ಸೇವೆ ಪದಕ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರಧಾನ ಮತ್ತು ಸನ್ನಡತೆಯ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಹಿಂದೆ ಜೈಲಿನ ಒಳಗೆ ಫೋನ್ ತಂದುಕೊಡುತ್ತಾರೆ. ಕೈದಿಗಳು…
ಡಾ.ಲಕ್ಷ್ಮೀ ಸಾಗರ್ ಅವರಿಗೆ ಶ್ರೇಷ್ಠ ವೈದ್ಯ ಪ್ರಶಸ್ತಿ ಸಾರ್ವಜನಿಕರಿಂದ ಅಭಿನಂದನೆ
ಕಡಬ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಲಕ್ಷ್ಮೀ ಸಾಗರ್ ಅವರಿಗೆ ಸರ್ಕಾರ ಶ್ರೇಷ್ಠ ವೈದ್ಯ ಪ್ರಶಸ್ತಿ ನೀಡಿರುವ ಹಿನ್ನೆಲೆಯಲ್ಲಿ ಕಡಬ ಸುತ್ತಮುತ್ತಲ ಸಾರ್ವಜನಿಕರು ಅವರಿಗೆ ಅಭಿನಂದನೆ ಸಲ್ಲಿಸಿದರು ಕಡಬ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಂದ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ ಬಿಂದು ಮಾಧವ್ ಸರ್ಕಾರಿ ಆಸ್ಪತ್ರೆಗಳೆಂದರೆ ಜನರು ಮೂಗು ಮುರಿಯುತ್ತಾರೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲೂ ಸಹ ಉತ್ತಮ ವೈದ್ಯರಿದ್ದು ಗ್ರಾಮೀಣ ಭಾಗದ ಜನತೆಗೆ ಗುಣಮಟ್ಟದ…
ಉದ್ಯೋಗ, ಅಧಿಕಾರ ಯಾವತ್ತೂ ಅಳತೆಗೋಲಾಗಬಾರದು. ಎಲ್ಲರನ್ನೂ ಸಮಾನವಾಗಿ ಕಾಣಬೇಕು ಶ್ರೀ ಸಿದ್ದಲಿಂಗ ಸ್ವಾಮೀಜಿ
ತುಮಕೂರು- ಉದ್ಯೋಗ, ಅಧಿಕಾರ ಯಾವತ್ತೂ ಕೂಡ ಅಳತೆಗೋಲಾಗಬಾರದು. ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಕರೆ ನೀಡಿದರು. ನಾವು ಮಾಡುವ ಉದ್ಯೋಗದಲ್ಲಿ ದಿವಾನ ಆದರೂ ಸರಿ, ಜವಾನ ಆದರೂ ಸರಿ ಎಲ್ಲರಿಗೂ ಸಮಾನವಾದಂತಹ ಅವಕಾಶ ಕಲ್ಪಿಸಿಕೊಟ್ಟಾಗ ಮಾತ್ರ ಬಸವಣ್ಣನ ಸಮಾನತೆ ಸಂದೇಶ ಸಾರ್ಥಕತೆ ಪಡೆಯುತ್ತದೆ ಎಂದು ಅವರು ಹೇಳಿದರು. ನಗರದ ಎಸ್ಐ ಟಿ ಯ ಬಿರ್ಲಾ ಆಡಿಟೋರಿಯಂನಲ್ಲಿ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಬೋಧಕೇತರ ಸಂಘದ ವತಿಯಿಂದ ಏರ್ಪಡಿಸಿದ್ದ ಬಸವ…
ಎಲ್ಲಾ ಕಲೆಗಳ ತಾಯಿಬೇರು ಜನಪದ ಕಲೆ ಡಾ.ಲಕ್ಷ್ಮಣದಾಸ್
ತುಮಕೂರು:ವಿದ್ಯಾರ್ಥಿ,ಯುವಜನರಿಗೆ ಎಲ್ಲಾ ಕಲೆಗಳ ತಾಯಿಬೇರಾಗಿರುವ ಜನಪದ ಕಲೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಶ್ರೀವಿನಾಯಕ ಕಲಾ ಸಂಘ ಹಮ್ಮಿಕೊಂಡಿರುವ ಜನಪದ ಸಂಭ್ರಮ ಅತ್ಯಂತ ಅರ್ಥಪೂರ್ಣವಾಗಿದೆ ಎಂದು ಕಲಾಶ್ರೀ ಡಾ.ಲಕ್ಷ್ಮಣದಾಸ್ ತಿಳಿಸಿದ್ದಾರೆ. ತುಮಕೂರು ತಾಲೂಕು ಸ್ವಾಂದೇನಹಳ್ಳಿ ಗ್ರಾಮದಲ್ಲಿ ಶ್ರೀವಿನಾಯಕ ಸಾಂಸ್ಕøತಿಕ ಕಲಾ ಸಂಘ(ರಿ),ಬೆಜ್ಜಿಹಳ್ಳಿ,ಶಿರಾ ತಾಲೂಕು ಇವರು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ತುಮಕೂರು ವಿವಿ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜನಪದ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ತುಮಕೂರು…
ನೂತನ ಸಂಸದರು ಹಾಗೂ ಕೇಂದ್ರ ಸಚಿವ ವಿ ಸೋಮಣ್ಣನವರಿಗೆ ಎನ್.ಡಿ. ಎ ಪಕ್ಷದ ಕಾರ್ಯಕರ್ತರಿಂದ ಅಭಿನಂದನೆ
ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಹೇರೂರು ಬಳಿಯಿರುವ ಬಾಲಾಜಿ ಕಲ್ಯಾಣ ಮಂಟಪದಲ್ಲಿ ತುಮಕೂರು ಜಿಲ್ಲೆಯ ನೂತನ ಸಂಸದರು ಹಾಗೂ ಕೇಂದ್ರ ಜಲಶಕ್ತಿ ಮತ್ತು ರಾಜ್ಯ ರೈಲ್ವೆ ಸಚಿವರಾದ ವಿ.ಸೋಮಣ್ಣ ನವರಿಗೆ ಎನ್.ಡಿ. ಎ ಪಕ್ಷದ ಕಾರ್ಯ ಕರ್ತರು ಹಾಗೂ ಮತದಾರರಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರತಿ ಶನಿವಾರ ಮತ್ತು ಭಾನುವಾರ ತುಮಕೂರಿನಲ್ಲಿ ಇರುತ್ತೇನೆ. ರೈತರು ಮತ್ತು ಜನ ಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಅವರ ಕುಂದು ಕೊರತೆಗಳನ್ನು…
ಪೊಲೀಸರ ಹತ್ಯೆಯ ನಂತರ ತಲೆ ಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
ಪಾವಗಡ ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರನ್ನು ಹತ್ಯೆಗೈದಿದ್ದ ಮಾಜಿ ನಕ್ಸಲೈಟ್ ವ್ಯಕ್ತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 2005ರ ಫೆಬ್ರವರಿ 10ರಂದು ಪಾವಗಡ ತಾಲ್ಲೂಕು ತಿರುಮಣಿ ಪೊಲೀಸ್ ಠಾಣೆಯ ವ್ಯಾಪ್ತಿಯ ವೆಂಕಟಮ್ಮನಹಳ್ಳಿಯ ಶಾಲೆಯಲ್ಲಿ ಭದ್ರತೆಗೆ ನೇಮಕವಾಗಿದ್ದ 9ಜನ ಪೊಲೀಸರನ್ನು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದ ಆಂಧ್ರಪ್ರದೇಶದ ಮಾಜಿ ನಕ್ಸಲ್ ಬಂದೆಲ ಬಾಯನ್ನನ ಮಗನಾದ ಚಂದ್ರ ಮುತ್ಯಾಲು ಅಲಿಯಾಸ್ ಬಂದೆಲ ಮುತ್ಯಾಲುನನ್ನು ಪಾವಗಡ ಗ್ರಾಮಾಂತರ ವೃತ್ತದ ಸಿ ಗಿರೀಶ್, ಎಎಸ್ಐ ಗೋವಿಂದರಾಜು ಮತ್ತು ಸಿಬ್ಬಂದಿಗಳಾದ ಧರ್ಮಪಾಲನಾಯ್ಕ,…