ಡಾ.ಲಕ್ಷ್ಮೀ ಸಾಗರ್ ಅವರಿಗೆ ಶ್ರೇಷ್ಠ ವೈದ್ಯ ಪ್ರಶಸ್ತಿ ಸಾರ್ವಜನಿಕರಿಂದ ಅಭಿನಂದನೆ
ಕಡಬ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಲಕ್ಷ್ಮೀ ಸಾಗರ್ ಅವರಿಗೆ ಸರ್ಕಾರ ಶ್ರೇಷ್ಠ ವೈದ್ಯ ಪ್ರಶಸ್ತಿ ನೀಡಿರುವ ಹಿನ್ನೆಲೆಯಲ್ಲಿ ಕಡಬ ಸುತ್ತಮುತ್ತಲ ಸಾರ್ವಜನಿಕರು ಅವರಿಗೆ ಅಭಿನಂದನೆ ಸಲ್ಲಿಸಿದರು ಕಡಬ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಂದ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ ಬಿಂದು ಮಾಧವ್ ಸರ್ಕಾರಿ ಆಸ್ಪತ್ರೆಗಳೆಂದರೆ ಜನರು ಮೂಗು ಮುರಿಯುತ್ತಾರೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲೂ ಸಹ ಉತ್ತಮ ವೈದ್ಯರಿದ್ದು ಗ್ರಾಮೀಣ ಭಾಗದ ಜನತೆಗೆ ಗುಣಮಟ್ಟದ…