ಎಂ.ಸಿ.ವೇಣುಗೋಪಾಲ್ ರವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವಂತೆ ಎಸ್.ಟಿ.ಶ್ರೀನಿವಾಸ್ ಮನವಿ
ತುಮಕೂರು ಗ್ರಾಮಾಂತರ ಕ್ಷೇತ್ರದ ಮುಖಂಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಟಿ.ಶ್ರೀನಿವಾಸ್ ಅವರು ಎಂ.ಸಿ.ವೇಣುಗೋಪಾಲ್ ರವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನಿಡುವಂತೆ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ತಮ್ಮ ಬೆಂಬಲಿಗರೊಂದಿಗೆ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಎಸ್.ಟಿ.ಶ್ರೀನಿವಾಸ್ ರವರು ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯ, ಸರ್ವರಿಗೂ ಸಮಾನ ಅಧಿಕಾರದ ಅವಕಾಶ ನೀಡುತ್ತಾ ಬಂದಿದೆ. ಕಾಂಗ್ರೆಸ್ ಪಕ್ಷದಿಂದ ಮಾತ್ರವೇ ಹಿಂದುಳಿದ ಸಮಾಜದವರು, ಸಾಮಾನ್ಯ ಕಾರ್ಯಕರ್ತರೂ ರಾಜಕೀಯ…