ಸರ್ಕಾರಿ ಕಾರ್ಯಕ್ರಮಗಳ ಯಶಸ್ವಿಗೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ
ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸಮನ್ವಯದಿಂದ ಕೆಲಸ ಮಾಡಿದಾಗ ಸರ್ಕಾರಿ ಕಾರ್ಯಕ್ರಮಗಳ ಯಶಸ್ವಿ ಸಾಧ್ಯ: ಶುಭ ಕಲ್ಯಾಣ್ ತುಮಕೂರು: ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸಮನ್ವಯದಿಂದ ಕೆಲಸ ಮಾಡಿದಾಗ ಮಾತ್ರ ಸರ್ಕಾರಿ ಕಾರ್ಯಕ್ರಮಗಳು ಯಶಸ್ವಿಯಾಗಿ ಅನುಷ್ಟಾನ ಗೊಳ್ಳಲು ಸಾಧ್ಯ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಕೋರ ಹೋಬಳಿ ಮುದ್ದೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದ ಜನಸ್ಪಂದನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ಸರ್ಕಾರಿ ಆಡಳಿತವನ್ನು ಜನರ ಬಳಿ ತಂದು ಜನರ ಸಮಸ್ಯೆಗಳನ್ನು ಪರಿಹರಿಸುವುದೇ ಜನ ಸ್ಪಂದನ ಕಾರ್ಯಕ್ರಮದ ಉದ್ದೇಶವಾಗಿದ್ದು,…