ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿ ಲೋಕೇಶ್ವರ್
ಗುಬ್ಬಿ: ಪೋಷಕರು ತಮ್ಮ ಮಕ್ಕಳನ್ನು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಿದರೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಯಾಗಲು ಸಾಧ್ಯವಾಗುವುದು ಎಂದು ಖೋ ಖೋ ಫೆಡರೇಶನ್ ರಾಜ್ಯಘಟಕದ ಅಧ್ಯಕ್ಷರಾದ ಹಾಗೂ ರಾಷ್ಟ್ರೀಯ ಉಪಾಧ್ಯಕ್ಷರಾದ ಲೋಕೇಶ್ವರ್ ತಿಳಿಸಿದರು. ಭಾನುವಾರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಮಕ್ಕಳ ಖೋಖೋ ಮತ್ತು ವಾಲಿಬಾಲ್ ಆಟಗಳ ತರಬೇತಿ ಹಾಗೂ ಬೇಸಿಗೆ ಶಿಬಿರ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿದ ಅವರು ಖೋ ಖೋ ಆಟವು ಅಂತರಾಷ್ಟ್ರೀಯ ಕ್ರೀಡೆಯಾಗಿ ರೂಪಗೊಂಡಿದೆ. ಖೋ…