ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಹೇಳೋರಿಲ್ಲ, ಕೇಳೋರಿಲ್ಲ : ಜಿಲ್ಲಾ ಉಸ್ತುವಾರಿ ಸಚಿವರ ಆಕ್ರೋಶ
ತುಮಕೂರು: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲಿದ್ದು, ಯಾರೂ ಹೇಳೋರು, ಕೇಳೋರಿಲ್ಲದಂತಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಮುಖ್ಯಮಂತ್ರಿಗಳ ಭೇಟಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಕೊರಟಗೆರೆ ತಾಲ್ಲೂಕು ಬಜ್ಜನಹಳ್ಳಿ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿರುವುದು ಅಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ. ಕಚೇರಿಯಲ್ಲಿ ಕುಳಿತು ಪತ್ರಗಳಿಗೆ…