ರೈತರಿಂದ ಸಾಲ ವಸೂಲಾತಿ ಮಾಡುವಂತಿಲ್ಲ-ಜಿಲ್ಲಾಧಿಕಾರಿ ಸೂಚನೆ
ತುಮಕೂರು: ಬರಪರಿಸ್ಥಿತಿಯಿಂದ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿ ಕಂಗಾಲಾಗಿರುವ ಹಿನ್ನೆಲೆಯಲ್ಲಿ ಮುಂದಿನ 2 ತಿಂಗಳವರೆಗೂ ರೈತರಿಂದ ಸಾಲ ವಸೂಲಾತಿ ಮಾಡುವಂತಿಲ್ಲವೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬ್ಯಾಂಕು, ಮೈಕ್ರೋ ಫೈನಾನ್ಸ್ ಕಂಪನಿ, ಖಾಸಗಿ ಲೇವಾದೇವಿಗಾರರು ಹಾಗೂ ಸಾಲದಾತರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ರಾತ್ರಿ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ತುರ್ತಾಗಿ ವಿಡಿಯೋಕಾರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ಮಳೆ ಬಾರದೆ ಈಗಾಗಲೇ ರೈತರು ಸಂಕಷ್ಟದಲ್ಲಿದ್ದಾರೆ. ಸಂಕಷ್ಟದಿಂದ ಹೊರಬರಲು ಮಾಡಿರುವ ಸಾಲ…