ಜೂ.1ರೊಳಗಾಗಿ ಮತ ಎಣಿಕಾ ಏಜೆಂಟ್ ನೇಮಕಕ್ಕೆ ಜಿಲ್ಲಾ ಚುನಾವಣಾ ಅಧಿಕಾರಿ ಶುಭ ಕಲ್ಯಾಣ ನಿರ್ದೇಶನ.
ತುಮಕೂರು: ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜೂನ್ 4ರಂದು ನಡೆಯಲಿರುವ ಮತ ಎಣಿಕಾ ಕಾರ್ಯಕ್ಕೆ ಎಣಿಕಾ ಏಜೆಂಟರನ್ನು ನೇಮಿಸಿ, ಜೂನ್ 1ರೊಳಗಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸೋಮವಾರ ಸಭೆ ನಡೆಸಿ ಮಾತನಾಡಿದ ಅವರು ಜೂನ್ 4ರಂದು ನಗರದ ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ…