ದೂರುಗಳು ದುರುದ್ದೇಶಗಳಿಂದ ಕೂಡಿರಬಾರದು : ನ್ಯಾ: ಫಣೀಂದ್ರ.
ತುಮಕೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಒದಗಿಸುವಲ್ಲಿ ಅಧಿಕಾರಿ/ಸಿಬ್ಬಂದಿಗಳಿಂದ ವಿಳಂಬ ಹಾಗೂ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಸಲ್ಲಿಸುವ ದೂರುಗಳು ವೈಯಕ್ತಿಕ ದ್ವೇಷ ಹಾಗೂ ದುರುದ್ದೇಶಗಳಿಂದ ಕೂಡಿರಬಾರದು ಎಂದು ಕರ್ನಾಟಕ ರಾಜ್ಯ ಲೋಕಾಯುಕ್ತದ ಗೌರವಾನ್ವಿತ ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ತಿಳಿಸಿದರು. ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಶುಕ್ರವಾರ ಕರ್ನಾಟಕ ಲೋಕಾಯುಕ್ತ ಕಚೇರಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕರಿಂದ ಕುಂದು ಕೊರತೆ ಅಹವಾಲುಗಳ ಸ್ವೀಕಾರ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ…