ಜಲ್ ಜೀವನ್ ಮಿಷನ್ ಕಾಮಗಾರಿಯಲ್ಲಿ ಕಳಪೆ ಕಂಡುಬಂದರೆ ಕ್ರಮ: ಕೇಂದ್ರ ಸಚಿವ ವಿ.ಸೋಮಣ್ಣ
ತುಮಕೂರು: ಜಿಲ್ಲೆಯಲ್ಲಿ ಅನುಷ್ಟಾನಗೊಳ್ಳುತ್ತಿರುವ ಜಲ್‍ಜೀವನ್ ಮಿಷನ್ ಕಾಮಗಾರಿಗಳ ಮೌಲ್ಯ ಪರಿವೀಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಳೀಯ ಶಾಸಕರು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನೊಳಗೊಂಡ ತನಿಖಾ ತಂಡ ರಚಿಸುವಂತೆ ರೈಲ್ವೇ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿಂದು ನಡೆದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿಯವರ ಕನಸಿನ ಯೋಜನೆಯಾದ ಜಲ್ ಜೀವನ್ ಮಿಷನ್ ಯೋಜನೆ ಅನುಷ್ಟಾನಕ್ಕಾಗಿ ರಾಜ್ಯಕ್ಕೆ 7…